ವಿಟ್ಲ: ರೋಟರಿ ಕ್ಲಬ್ ವತಿಯಿಂದ ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶಿಷ್ಟ ರೀತಿಯಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.

ರೋಟರಿ ಕ್ಲಬ್ ಅಧ್ಯಕ್ಷ ಡಾ| ಚರಣ್ ಕಜೆ, ಶಾಲಾ ಮುಖ್ಯ ಶಿಕ್ಷಕ, ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಅರಣ್ಯಾಧಿಕಾರಿಗಳು ಮತ್ತು ಶಾಲಾ ಮಕ್ಕಳು ಭಾಗವಹಿಸಿದ್ದರು.
