ಬಂಟ್ವಾಳ: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ಕಾರ್ಗಿಲ್ ದಿನಾಚರಣೆಯನ್ನು ಆಚರಿಸಲಾಯಿತು. ದೇಶಕ್ಕಾಗಿ ಹೋರಾಡಿ ಅಮರರಾದ ಯೋಧರ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ನಡೆಸಲಾಯಿತು. ವಿದ್ಯಾರ್ಥಿನಿ ಶ್ರೀ ಲಕ್ಷ್ಮೀ ಕಾರ್ಗಿಲ್ ವಿಜಯೋತ್ಸವ ಮಹತ್ವದ ಬಗ್ಗೆ ಮಾತನಾಡಿದಳು.
ಶಾಲಾ ಸಂಚಾಲಕ ಪ್ರಹ್ಲಾದ್ ಶೆಟ್ಟಿ , ಮನ್ಮಥ ಶೆಟ್ಟಿ, ಶಾಲಾ ಆಡಳಿತಾಧಿಕಾರಿ ಸಿ.ಶ್ರೀಧರ್,
ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಆಳ್ವ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ಶಿಕ್ಷಕಿ ಲಕ್ಷ್ಮೀ, ಬಾಲವಿಕಾಸ ಟ್ರಸ್ಟ್ನ ಕಾರ್ಯದರ್ಶಿ ಕೆ. ನಾರಾಯಣ ಶೆಟ್ಟಿ, ಬಾಲವಿಕಾಸ ಪ್ರೌಢಶಾಲಾ ಮುಖ್ಯಶಿಕ್ಷಕಿ ವಿಜಯಲಕ್ಷ್ಮೀ ವಿ.ಶೆಟ್ಟಿ , ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಗ್ರೇಸ್ ಪಿ ಸಲ್ದಾನ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಭೂಮಿಕಾ ಸ್ವಾಗತಿಸಿ, ಶಾಲಾನಾಯಕ ವಿಜೇತ್.ಕೆ.ಎಂ. ವಂದಿಸಿದರು. ವಿದ್ಯಾರ್ಥಿ ಪ್ರಥಮ್, ಅಮೃತಾ ಕೆ.ಭಟ್ ಕಾರ್ಯಕ್ರಮ ನಿರ್ವಹಿಸಿದರು.

