ಬಂಟ್ವಾಳ: ದ.ಕ.ಜಿಲ್ಲಾ ಪಂಚಾಯತ್ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಗ್ರಾಮ ನೈರ್ಮಲ್ಯ ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ಸ್ವಚ್ಚ ಸರ್ವೇಕ್ಷಣ ಗ್ರಾಮೀಣ 2018 ರ ಪೂರ್ವಭಾವಿ ಸಭೆಯನ್ನು ತಾ.ಪಂ.ನ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ನಡೆಯಿತು.

swacchatha program (1)
ಕಾರ್ಯಕ್ರಮದ ಅಧ್ಯಕ್ಷರಾದ ತಾ.ಪಂ.ಅದ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ, ಗ್ರಾ.ಪಂ.ಗಳಲ್ಲಿ ಸ್ಚಚ್ಚತೆಗೆ ಸಾರ್ವಜನಿಕರ ಪ್ರತಿಕ್ರಿಯೆ ಯಾವ ರೀತಿಯಲ್ಲಿ ಬರುತ್ತದೆ ಎಂಬುದು ಪ್ರಾಮುಖ್ಯತೆ ಪಡೆಯುತ್ತದೆ. ಕಸವನ್ನು ಬೇಕಾಬಿಟ್ಟಿ ರಸ್ತೆ ಬದಿಯಲ್ಲಿ ಹಾಕದಂತೆ ಪಿಡಿಒಗಳು ಕ್ರಮಕೈಗೊಳ್ಳಬೇಕು. ಗ್ರಾ.ಪಂ.ವ್ಯಾಪ್ತಿಯ ಲ್ಲಿ ಸಾರ್ವಜನಿಕ ಸ್ಥಳ, ಶಾಲೆ , ಆರೋಗ್ಯ ಕೇಂದ್ರ, ಧಾರ್ಮಿಕ ಸ್ಥಳಗಳಲ್ಲಿ, ಗ್ರಾಮದ ಮುಖ್ಯ ಬೀದಿಗಳಲ್ಲಿ ಸ್ವಚ್ಚತೆ ಕಾಪಾಡಿಕೊಂಡು ಶೌಚಾಲಯಗಳನ್ನು ಸುಸ್ಥಿತಿಯಲ್ಲಿಡಿ ಎಂದು ಹೇಳಿದರು.

swacchatha program (2)
ಸ್ವಚ್ಚತೆ ಬೇಕಾಗಿ ಬೇರೆ ಬೇರೆ ಕಾರ್ಯಕ್ರಮ ಗಳನ್ನು ಹಾಕಿಕೊಂಡು ಅದುಅನುಷ್ಠಾನಗೊಳ್ಳುವಂತೆ ಕ್ರಮಕೈಗೊಳ್ಳಬೇಕು ಎಂದರು. ಜನರಿಗೆ ಸರಿಯಾದ ಮಾಹಿತಿ ಸಿಗುವ ರೀತಿಯಲ್ಲಿ ಪ್ರಮಾಣಿಕ ಪ್ರಯತ್ನ ಮಾಡಿದರೆ ಮಾತ್ರ ಸ್ವಚ್ಚ ಗ್ರಾಮದ ಕನಸು ಪರಿಣಾಮಕಾರಿಯಾಗಿ ಅಗಬಹುದು ಎಂದು ಹೇಳಿದರು.

swacchatha program (3)
ಈ ಸಂದರ್ಭದಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ತಹಶೀಲ್ದಾರ ಪುರಂದರ ಹೆಗ್ಡೆ , ಪುರಸಭಾ ಸಿ.ಒ.ರೇಖಾ ಶೆಟ್ಟಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *