ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.

prathibha karanji (1)
ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಇರುವ ಸೂಕ್ತ ವೇದಿಕೆಯೇ ಪ್ರತಿಭಾ ಕಾರಂಜಿ. ಇದರಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆಯೇ ಪ್ರಧಾನ ಎಂದು ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುಳಾ ಮಾಧವ ಮಾವೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

prathibha karanji (2)
ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದ ಶಾಲಾ ಸಂಚಾಲಕ ಜೆ.ಪ್ರಹ್ಲಾದ್ ಶೆಟ್ಟಿಯವರು ಮಾತನಾಡಿ ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಹೊರಗೆಡಹುವುದೇ ನಮ್ಮ ಧ್ಯೇಯವಾಗಿದ್ದು ತೀರ್ಪು ನ್ಯಾಯ ಬದ್ಧವಾಗಿರಬೇಕು ಎಂದು ಹೇಳಿದರು.

prathibha karanji (3)
ಬಂಟ್ವಾಳ ಇ.ಸಿ.ಓ ಪುಷ್ಪಾ ಮಾತನಾಡಿ ಪ್ರತಿಭಾ ಕಾರಂಜಿಯನ್ನು ಮಕ್ಕಳ ಹಬ್ಬದಂತೆ ಆಚರಿಸಬೇಕೆನ್ನುವುದು ಶಿಕ್ಷಣ ಇಲಾಖೆಯ ಆಶಯವಾಗಿದೆ ಎಂದು ತಿಳಿಸಿದರು.
ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯೆ ಮಂಜುಳಾ ಕುಶಲಾ ಗೌಡ , ಮಾಣಿ ಗ್ರಾಮ ಪಂಚಾಯತ್ ಸದಸ್ಯ ಇಬ್ರಾಹಿಂ ಕೆ. ಮಾಣಿ , ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಅಧಿಕಾರಿ ನಾರಾಯಣ ಗೌಡ , ಮಾಣಿ ಕ್ಲಸ್ಟರ್ ಸಂಪನ್ಮೂಲ ಅಧಿಕಾರಿ ಸತೀಶ್ ರಾವ್ , ಮಾಣಿ ಗ್ರಾಮ ಪಂಚಾಯತ್ ಸದಸ್ಯ ಸುದೀಪ್ ಕುಮಾರ್ ಶೆಟ್ಟಿ, ಕರ್ನಾಟಕ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಬಿ.ಕೆ.ಭಂಡಾರಿ , ಕಡೇಶಿವಾಲಯ ವಲಯ ಸಂಪನ್ಮೂಲ ಅಧಿಕಾರಿ ಜಯಲಕ್ಷ್ಮೀ , ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಸಿ.ಶ್ರೀಧರ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್.ಪಿ.ಸಲ್ಡಾನಾ ಉಪಸ್ಥಿತರಿದ್ದರು. ಶಿಕ್ಷಕಿ ಲೀಲಾ ಕಾರ್ಯಕ್ರಮ ನಿರ್ವಹಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ .ವಿ.ಶೆಟ್ಟಿ ಸ್ವಾಗತಿಸಿ ವಂದಿಸಿದರು.

By Suddi9

Leave a Reply

Your email address will not be published. Required fields are marked *