ಬಂಟ್ವಾಳ: ಅಮ್ಟಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಜು.30ರಂದು ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಅದ್ಯಕ್ಷ ಯಶವಂತ ಶೆಟ್ಟಿಯವರ ಅದ್ಯಕ್ಷ ತೆಯಲ್ಲಿ ನಡೆಯಿತು.

haalu uthpadakara-mahasabhe
ವಾರ್ಷಿಕ ಮಹಾಸಭೆಯಲ್ಲಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಜಗದೀಶ್ ಎ ಶುಧ್ಧ ಹಾಲಿನ ಉತ್ಪಾದನೆ ಹಾಗೂ ಆದುನಿಕ ಹೈನುಗಾರಿಕೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯದರ್ಶಿ ಸತೀಶ್ ರೈ ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರಗಳ ವಾರ್ಷಿಕ ವರದಿ ಮಂಡಿಸಿದರು.
ಈ ಸಂದರ್ಭದಲ್ಲಿ ಹಾಲು ಉತ್ಪಾದಕ ಸದಸ್ಯರಿಗೆ ಬೋನಸ್ ಹಾಗೂ ಡಿವಿಡೆಂಡ್ ವಿತರಿಸಲಾಯಿತು. ಸಂಘದ ನಿರ್ದೇಶಕ ಅನಿಲ್ ಹೆರಾಲ್ಡ್ ಫ್ರಾಂಕ್ ಸ್ವಾಗತಿಸಿ, ಉಪಾಧ್ಯಕ್ಷ ಉದಯಕುಮಾರ್ ವಂದಿಸಿದರು.

By suddi9

Leave a Reply

Your email address will not be published. Required fields are marked *