ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಬೇಕೆಂದು ಆ.2 ಗುರುವಾರದಂದು ಬಂದ್ ಮಾಡಲಾಗುವುದು ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಸವರಾಜ ಕರಿಗಾರ ಹೇಳಿದರು.
ಕೆಲವರು ಬಂದ್ ಹಿಂಪಡೆಯಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಆದರೆ ಬಂದ್ ಹಿಂಪಡೆದಿಲ್ಲ. ಬದಲಾಗಿ ಮೊದಲೆ ಹೇಳಿದಂತೆ ನಾಳೆ ಸಂಪೂರ್ಣ ಬಂದ್ ಮಾಡಲಾಗುತ್ತದೆ.
ಪ್ರತ್ಯೇಕ ರಾಜ್ಯ ಬೇಡಿಕೆ ಈಡೇರುವವರೆಗೆ ಹೋರಾಟ ಮಾಡಲಾಗುವುದು. ಅಲ್ಲದೆ ನವೆಂಬರ್ ಒಂದರಂದು ಪ್ರತ್ಯೇಕ ಧ್ವಜ ಹಾರಿಸಲಾಗುವುದು ಎಂದು ಪ್ರತಿಕ್ರಿಯಿಸಿದ್ದಾರೆ.
