ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲು ಕಂಡಿತ್ತು. ಕೇಸರಿಯ ಪ್ರಭಾವಕ್ಕೆ ಯು.ಟಿ ಖಾದರ್ ಹೊರತು ಪಡಿಸಿದರೆ, ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದ ರಮಾನಾಥ್ ರೈ ಕೂಡ ಸೋಲು ಅನುಭವಿಸುವಂತೆ ಆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಬಾರಿ ಬಿಜೆಪಿ ಗೆದ್ದರೆ ಇನ್ನೊಂದು ಬಾರಿ ಕಾಂಗ್ರೆಸ್ ಗೆದ್ದ ಇತಿಹಾಸವಿದೆ. ಈ ಬಾರಿ ಸಾಂಪ್ರದಾಯಿಕ ಮತ ಕ್ರೋಢಿಕರಿಸಿದರೆ ಕ್ಷೇತ್ರ ಗೆಲ್ಲಬಹುದು ಎಂಬ ಲೆಕ್ಕಾಚಾರ ಕೂಡ ನಡೆಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಪ್ರಭಾವಿ ಕಾಂಗ್ರೆಸ್ ನಾಯಕರಾಗಿದ್ದ ರಾಮನಾಥ್ ರೈ ಸೋಲು ಪಕ್ಷಕ್ಕೆ ಆಘಾತವನ್ನು ನೀಡಿತಾದರೂ, 2019ರ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಾಲೀಮು ನಡೆಸುವಂತೆ ಎಚ್ಚರಿಕೆಯ ಸಂದೇಶವನ್ನು ನೀಡಿದೆ.
ಈಗಾಗಲೇ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಚುನಾವಣೆಗೆ ಬೇಕಾದ ಸಿದ್ಧತೆಯನ್ನು ನಡೆಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ನೇತೃತ್ವದಲ್ಲಿ ಕೆಪಿಸಿಸಿ ಸದಸ್ಯರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮುಖಂಡರ ಸಭೆ ನಡೆಸಲಾಯಿತು ಲೋಕಸಭಾ ಕಣಕ್ಕೆ ಮಾಜಿ ಅರಣ್ಯ ಸಚಿವ ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿಯನ್ನು ರಮಾನಾಥ್ ರೈ ಗೆ ಒಪ್ಪಿಸಿದ್ದು, ಲೋಕಸಭಾ ಚುನಾವಣೆಗೆ ಕಣಕ್ಕೆ ಇಳಿಯುವಂತೆ ರಮಾನಾಥ್ ರೈ ಸೂಚನೆ ನೀಡಲಾಗಿದೆ. ಇದಕ್ಕೆ ಅಲ್ಲಿನ ಕಾಂಗ್ರೆಸ್ ಮುಖಂಡರು ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಇದಕ್ಕೆ ರೈ ಕೂಡ ಇಂಗಿತ ವ್ಯಕ್ತಪಡಿಸಿದ್ದು, ಪಕ್ಷ ನೀಡಿದ ಹೊಸ ಜವಾಬ್ದಾರಿಯನ್ನು ನಿರ್ವಹಿಸುವುದಾಗಿ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಕೇಂದ್ರದಲ್ಲಿನ ಲೋಪದೋಷಗಳನ್ನ ಜನರಿಗೆ ತಿಳಿಸುವುದು. ಕಾಂಗ್ರೆಸ್ ನಮ್ಮ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಪಕ್ಷ ಸಂಘಟನೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತೇವೆ. ಒಟ್ಟಾಗಿ ಚುನಾವಣೆಯನ್ನು ಎದುರಿಸುವ ಬಗ್ಗೆ ಸ್ಪಷ್ಟ ಸೂಚನೆ ನೀಡಲಾಗಿದೆ, ಪಕ್ಷದ ಸಾಮಾನ್ಯ ಕಾರ್ಯಕರ್ತ ನಾನಗಿದ್ದು, ಕಾಂಗ್ರೆಸ್ ಪಕ್ಷ ಸಾಕಷ್ಟು ಅವಕಾಶ ಕೊಟ್ಟಿದೆ. ನಾನು ಕಾಂಗ್ರೆಸ್ನಿಂದ ಋಣಮುಕ್ತನಾಗಲು ಸಾಧ್ಯವಿಲ್ಲ. ನಾನು ಪಕ್ಷ ಕೊಟ್ಟ ಜವಾಬ್ದಾರಿ ನಿಭಾಯಿಸುತ್ತೇನೆ ಎಂದು ಹೇಳಿದರು.
ದಕ್ಷಿಣ ಕನ್ನಡದಲ್ಲಿ ರೈ ನೇತೃತ್ವದಲ್ಲಿ ಕೆಪಿಸಿಸಿ ಸಮಿತಿ ರಚನೆ ಮಾಡಲಾಗಿದೆ, ಅವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲು ಸೂಚನೆ ನೀಡಲಾಗಿದೆ. ಚುನಾವಣೆಯಲ್ಲಿ ಕಾರ್ಯಕರ್ತರನ್ನ ಹುರಿದುಂಬಿಸುವುದು. ಬ್ಲಾಕ್ ಮತ್ತು ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುವುದು. ಕ್ಷೇತ್ರದಲ್ಲಿ ಗೆಲ್ಲುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ಕೆಪಿಸಿಸಿ ಸಭೆ ಬಳಿಕ ಐವಾನ್ ಡಿಸೋಜಾ ತಿಳಿಸಿದ್ದಾರೆ.
ಕಾಂಗ್ರೆಸ್ ಗಟ್ಟಿ ಮಾಡುವ ಕೆಲಸ ಜಿಲ್ಲೆಯಲ್ಲಿ ಮಾಡುತ್ತೇನೆ. ಕಾಂಗ್ರೆಸ್, ಬಿಜೆಪಿ ಪೈಪೋಟಿ ಇರುವ ಜಿಲ್ಲೆ ನಮ್ಮದು. ಪಕ್ಷ ಅವಕಾಶ ಕೊಟ್ಟರೆ ನಾನು ಸ್ಪರ್ಧಿಸುತ್ತೇನೆ. ಬೇರೆಯವರಿಗೆ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ ಎಂದು ರಮಾನಾಥ್ ರೈ ಸಭೇಯಲ್ಲಿ ಹೇಳಿದರು.
