ಬೆಂಗಳೂರು: ನಗರದಲ್ಲಿ ದಿನದಿಂದ ದಿನೇ ಡ್ರಗ್ ಮಾಫಿಯಾ ಹೆಚ್ಚುತ್ತಲೇ ಇದೆ. ಇದಕ್ಕೆ ಯಾವುದೇ ರೀತಿ ಸೂಕ್ತ ಕ್ರಮ ತೆಗೆದುಕೊಳ್ಳುವ ಲಕ್ಷಣ ಕಂಡುಬಂದಿಲ್ಲ. ರಾಜ್ಯ ಸರ್ಕಾರವೂ ಕೂಡ ಇದರ ವಿರುದ್ಧ ಕ್ರಮ ತೆಗೆದುಕೊಳ್ಳುವಲ್ಲಿ ವಿಫಲವಾಗುತ್ತಿದೆ ಎಂಧು ಬಿಜೆಪಿ ನಾಯಕ ಆರ್ ಅಶೋಕ್ ಕುಮಾರ್ ಹೇಳಿದ್ದಾರೆ.

ಕಳೆದ ಅಧಿವೇಶನದಲ್ಲಿ ಡ್ರಗ್ ಮಾಫಿಯಾ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಡ್ರಗ್ ಮಾಫಿಯಾದ ಬಗ್ಗೆ ನಾವು ಸದನದಲ್ಲಿ ಪ್ರಸ್ತಾಪ ಮಾಡಿದ್ದೆವು. ಡ್ರಗ್ ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗ್ರಹ ಸಚಿವರು ಭರವಸೆ ನೀಡಿದ್ದರು. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಒಬ್ಬರ ಮೇಲೂ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಲ್ಲ. ಈ ಮಾಪಿಯಾವನ್ನು ಮಟ್ಟ ಹಾಕಲು ಯಾವುದೇ ಪ್ರಯತ್ನವೂ ನಡೆದಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ನಿಯೋಗವು ಬೆಂಗಳೂರು ನಗರ ಪೋಲಿಸ್ ಆಯುಕ್ತ ಸುನೀಲ್ ಕುಮಾರ್ ಅವರಿಗೆ ಡ್ರಗ್ ಮಾಫಿಯಾ ವಿರುದ್ಧ ದೂರು ಸಲ್ಲಿಸಿದೆ.
