ಮೂಡುಬಿದಿರೆ: ಒಂಟಿಕಟ್ಟೆಯ ಕಡಲಕೆರೆಗೆ ಕಾಟ್ಲಾ ಮತ್ತು ರೋಹೂ ಜಾತಿಯ 25 ಸಾವಿರ ಮೀನು ಮರಿಗಳನ್ನು ಬಿಡಲಾಯಿತು. ಶಾಸಕ ಉಮಾನಾಥ ಕೋಟ್ಯಾನ್ ಮೀನು ಮರಿಗಳನ್ನು ನೀರಿಗೆ ಬಿಡುವ ಮೂಲಕ ಚಾಲನೆ ನೀಡಿ, ಅದರ ಜೊತೆಗೆ ದೋಣಿ ವಿಹಾರಕ್ಕೂ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಪ್ರಕೃತಿ ಸೌಂದರ್ಯದಿಂದ ಕಂಗೊಳಿಸುವ ಕಡಲಕೆರೆಯನ್ನು ಪ್ರವಾಸೋದ್ಯಮ ಇಲಾಖೆಯ ಸಹಕಾರದೊಂದಿಗೆ ಮಿನಿ ಪಿಲಿಕುಳವಾಗಿ ಅಭಿವೃದ್ಧಿಪಡಿಸಲು ಪ್ರಯತ್ನಿಸುವುದಾಗಿ ಆಶ್ವಾಸನೆ ನೀಡಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ , ಜಿ. ಪಂ ಸದಸ್ಯ ಕೆ.ಪಿ. ಸುಚರಿತ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಡಾ. ರಮೇಶ್, ಪ್ರಭಾರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ, ಅರಣ್ಯಾಧಿಕಾರಿ ಪ್ರಕಾಶ್ ಪೂಜಾರಿ, ಪುರಸಭಾ ಸದಸ್ಯರಾದ ಪಿ.ಕೆ. ಥೋಮಸ್, ಹನೀಫ್ ಅಲಂಗಾರು, ದಿನೇಶ್ ಪೂಜಾರಿ, ನಾಗರಾಜ ಪೂಜಾರಿ, ಲಕ್ಷ್ಮಣ ಪೂಜಾರಿ, ಪ್ರಸಾದ್ ಕುಮಾರ್, ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕಿ ದಿವ್ಯಾ ಮತ್ತಿತರರು ಉಪಸ್ಥಿತರಿದ್ದರು.

ನಂತರ ಸಾಲು ಮರದ ತಿಮ್ಮಕ್ಕ ಉದ್ಯಾನವನದಲ್ಲಿ ಗಿಡಗಳನ್ನು ನೆಡಲಾಯಿತು.
