ಬಂಟ್ವಾಳ: ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪಲಕೋಡಿ ಎಂಬಲ್ಲಿ ಮೃತಪಟ್ಟ ಕೊರಗಪ್ಪ ಪೂಜಾರಿ ಎಂಬವರಿಗೆ ರೈತ ಸಂಜೀವಿನಿ ಅಪಘಾತ ವಿಮಾ ಯೋಜನೆಯಡಿ ಮಂಜೂರಾದ ರೂ 1ಲಕ್ಷ ಮೊತ್ತದ ಪರಿಹಾರಧನ ಚೆಕ್ಕನ್ನು ಮೃತರ ಪತ್ನಿ ರತ್ನಾವತಿ ಅವರಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಬುಧವಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ, ಉದ್ಯಮಿ ಪಿ.ಎಸ್.ಅಬ್ದುಲ್ ಹಮೀದ್, ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಉಮೇಶ ಬೋಳಂತೂರು, ಗ್ರಾಮ ಪಂಚಾಯಿತಿ ಸದಸ್ಯರಾದ ವಿಶ್ವನಾಥ ಪೂಜಾರಿ, ಸುಲೇಮಾನ್, ನೀರಾ ಮೂರ್ತೆ ತೆಂಗು ಬೆಳೆಗಾರರ ಫೆಡರೇಶನ್ ಅಧ್ಯಕ್ಷ ಮಾಧವ ಕರ್ಬೆಟ್ಟು, ವಲಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭರತ್‍ರಾಜ್ ಮತ್ತಿತರರು ಉಪಸ್ಥಿತರಿದ್ದರು.
