ಮೂಡುಬಿದಿರೆ: ಸಾರ್ವಜನಿಕ ಸ್ಥಳ, ಶಾಲಾ ಆವರಣ, ಗ್ರಾಮಗಳಲ್ಲಿ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು ಎಂಬ ಉದ್ದೇಶಕ್ಕಾಗಿ ಧರ್ಮಸ್ಥಳದ ಧರ್ಮಾಧಿಕಾರಿಯವರಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಕಾರ್ಕಳ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆ.8ರಿಂದ ಆ.14ರವರೆಗೆ ಈ ಸ್ವಚ್ಚತಾ ಕಾರ್ಯಕ್ರಮ ನಡೆಯಲಿದೆ.

ಇದರ ಅಂಗವಾಗಿ ಆ4ರಂದು ಬೆಳುವಾಯಿ ವಲಯದ ಅಚ್ಚರಕಟ್ಟೆಯ ಕೊಡಮಣಿತ್ತಾಯ ದೇವಸ್ಥಾನ ಹಾಗೂ ಗುಡ್ಡೆಯಂಗಡಿ ಸತ್ಯಸಾರಮಣಿ ದೇವಸ್ಥಾನ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಸದ್ರಿ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಬಗ್ಗೆ ಮಾಹಿತಿ ನೀಡಲಾಯಿತು.
ಈ ಕಾರ್ಯಕ್ರಮ ಈ ಒಂದು ದಿನಕ್ಕೆ ಸೀಮಿತವಾಗದೆ, ಸ್ವಚ್ಚತೆಯ ರೂಢಿಯನ್ನು ನಿರಂತರವಾಗಿ ಇಟ್ಟುಕೊಳ್ಳಬೇಕು ಎಂದು ಗಣ್ಯರು ಅಭಿಪ್ರಾಯ ಪಟ್ಟರು.

ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯಸ್ಥರು ಸುಕುಮಾರ್ ಬಲ್ಲಾಳ್, ಶೋಭಾ ಒಕ್ಕೂಟದ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ವಲಯದ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಬಳಿಕ ಸ್ವಚ್ಚತಾ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಂಡರು.
