ವಿಟ್ಲ: ಸೈಂಟ್ ರೀಟಾ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಫಾ| ಲ್ಯಾನ್ಸಿ ಸಾಲ್ಡಾನ ನೆರವೇರಿಸಿದರು.
ವಿಟ್ಲ ಚರ್ಚ್ನ ಧರ್ಮಗುರು ಫಾ| ಎರಿಕ್ ಕ್ರಾಸ್ತಾ, ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು.
ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ ಸ್ವಾತಂತ್ರೋತ್ಸವದ ಧ್ವಜಾರೋಹನವನ್ನು ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ಅಂತರರಾಷ್ಟ್ರೀಯ ಕ್ರೀಡಾಪಟು ವಿಜಯ ಭಾರತಿ ಎನ್ ಭಟ್ ಇವರು ನೆರವೇರಿಸಿದರು.
ವಿಟ್ಲದ ಮಾದರಿ ಶಾಲಾ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ವಿಟ್ಲ ಅರಮನೆಯ ಕೃಷ್ಣಯ್ಯ ಕೆ ಇವರು ನೆರವೇರಿಸಿದರು.

ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಡಾ| ಚರಣ್ ಕಜೆ ನೆರವೇರಿಸಿದರು.
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ನಲ್ಲಿ ನಡೆದ ಸ್ವಾತಂತ್ರೋತ್ಸವ ದಿನದ ಧ್ವಜಾರೋಹಣವನ್ನು ಸಂಸ್ಥೆಯ ಮಾಜಿ ಅಧ್ಯಕ್ಷ ಅನಂತ ಭಟ್ ನೆರವೇರಿಸಿದರು.




