ನಮ್ಮ ದೇಶ ಕಂಡ ಒಂದು ಅಪರೂಪದ ಅಜಾತಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93) ಅನಾರೋಗ್ಯದಿಂದ ಆ16ರಂದು ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.ಸತತ 4 ವರ್ಷಗಳ ಕಾಲ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಇಡೀ ದೇಶವೇ ಅಪರೂಪದ ವ್ಯಕ್ತಿಗೆ ಕಂಬನಿ ಮಿಡಿದಿದೆ. ಇಂದು ರಾತ್ರಿ ಕೃಷ್ಣ ಮೆನನ್ ಮಾರ್ಗದಲ್ಲಿರುವ ನಿವಾಸದಲ್ಲಿ ಗಣ್ಯರಿಗೆ ವಾಜಪೇಯಿ ಅವರ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಅಗಲಿರುವ ಹಿರಿಯ ಚೇತನರ ನಿಧನಕ್ಕೆ ಹಿರಿಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
