ಬಂಟ್ವಾಳ: ಗಾಣಿಗರ ಸೇವಾ ಸಂಘದ ವತಿಯಿಂದ ಕುಂದಾಪುರ ಶ್ರೀ ವ್ಯಾಸರಾಜ ಮಠದಲ್ಲಿ ಚಾತುರ್ಮಾಸ ವೃತಾಚರಣೆಯಲ್ಲಿರುವ ಲಕ್ಷ್ಮೀಂದ್ರ ತೀರ್ಥ ಸ್ವಾಮೀಜಿ ಅವರನ್ನು ಭಾನುವಾರ ಭೇಟಿ ನೀಡಿ ಪಾದಪೂಜೆ, ಮುದ್ರಾಧಾರಣೆಯಲ್ಲಿ ಪಾಲ್ಗೊಂಡರು.
ಬಳಿಕ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ, ಉಪಾಧ್ಯಕ್ಷ ನಾಗೇಶ ಕಲ್ಲಡ್ಕ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಎಂ.ನಾರಾಯಣ ಸಪಲ್ಯ, ಉಪಾಧ್ಯಕ್ಷ ಲಿಂಗಪ್ಪ ಕರ್ಕೇರ ಮತ್ತಿತರ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಮತ್ತಿತರ ಗಣ್ಯರು ಭಾಗವಹಿಸಿದ್ದರು.

