ಮೂಡುಬಿದಿರೆ : ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 2018-19ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಲೆಕ್ಕ ಪರಿಶೋಧನೆಯ ವಿಶೇಷ ಗ್ರಾಮಸಭೆಯು ಶಿರ್ತಾಡಿ ಗ್ರಾ.ಪಂ ಸಭಾಭವನದಲ್ಲಿ ಆ.18 ಶನಿವಾರದಂದು ನಡೆಯಿತು.

ಶಿರ್ತಾಡಿ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಲಕ್ಷ್ಮಣ್ ನಾಯಕ್ ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲತಾ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರಾಜೇಶ್ ಸುವರ್ಣ, ಸದಸ್ಯರು. ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯ ತಾ.ಪಂ ಇಂಜಿನಿಯರ್ ಯಶೋಧರ್, ಸಾಮಾಜಿಕ ಲೆಕ್ಕ ಪರಿಶೋಧನೆ ತಾಲೂಕು ಸಂಯೋಜಕಿ ಧನಲಕ್ಷ್ಮೀ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೋಣು, ಕಾರ್ಯದರ್ಶಿ ರವಿ ಉಪಸ್ಥಿತರಿದ್ದರು.

ಉದ್ಯೋಗ ಖಾತರಿ ಯೋಜನೆಯ ಫಲಾನುಭವಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *