ಮೈಸೂರು: ನಾಡ ಹಬ್ಬ ದಸರಾ ಪ್ರತಿ ವರ್ಷವೂ ವಿಜ್ರಂಬಣೆಯಿಂದ ಅದ್ದೂರಿಯಾಗಿ ನಡೆಯುತ್ತದೆ. ರಾಜ್ಯದ ಜನತೆ ದಸರಾ ಹಬ್ಬವನ್ನು ನೋಡಲು ಕುತೂಹಲದಿಂದ ಕಾಯುತ್ತಾರೆ. ಆದರೆ ಇತ್ತೀಚೆಗೆ ನಡೆದ ಭೀಕರ ಮಳೆ ಪ್ರವಾಹದಿಂದ ತತ್ತರಿಸಿರುವ ಕೊಡಗು ಜಿಲ್ಲೆ ಸಂಕಷ್ಟದಲ್ಲಿದೆ. ಅದಕ್ಕಾಗಿ ಸರ್ಕಾರ ಸರಳ ರೀತಿಯಲ್ಲಿ ದಸರಾ ಆಚರಿಸಲು ನಿರ್ಧಾರ ಮಾಡಿದೆ.

mysore dasara
ಕೊಡಗಿನಲ್ಲಿ ಪ್ರವಾಹ ಸಂತ್ರಸತರಿಗೆ ಪುನರ್ವಸತಿ ಹಾಗೂ ಪರಿಹಾರ ಕಾರ್ಯಚರಣೆಯಲ್ಲಿ ಜಿಲ್ಲಾಡಳಿತ ತೊಡಗಿರುವ ಹಿನ್ನೆಲೆಯಲ್ಲಿ ವಿಶ್ವ ಪ್ರಸಿದ್ಧ ದಸರಾದ ಗಜಪಯಣ ಸಮಾರಂಭವನ್ನು ಮುಂದೂಡಲಾಗಿದೆ. ಇದೇ ತಿಂಗಳಿನಲ್ಲಿ ನಡೆಯಬೇಕಿದ್ದ ಗಜಪಯಣ ಸಮಾರಂಭವನ್ನು ರದ್ದು ಮಾಡಲಾಗಿದೆ. ಪ್ರವಾಹದ ಹಿನ್ನೆಲೆ ಗಜಪಯಣವನ್ನು ಬೇರೆ ದಿನಾಂಕದಂದು ಮಾಡಲಾಗುತ್ತಿದ್ದು, ಸದ್ಯದಲ್ಲೇ ತಿಳಿಸುವುದಾಗಿ ಹೇಳಿದ್ದಾರೆ.

By suddi9

Leave a Reply

Your email address will not be published. Required fields are marked *