ಬಂಟ್ವಾಳ: ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಪ್ರತಿದಿನ ಬೆಳಿಗ್ಗೆ ಯಾವುದೇ ಜಾತಿ ಮತ್ತು ಧರ್ಮ ಹಾಗೂ ವಯೋಮಿತಿ ಬೇಧವಿಲ್ಲದೆ ಸೂರ್ಯ ನಮಸ್ಕಾರದಂತಹ ಸರಳ ಯೋಗ ಪದ್ಧತಿಯನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಆರೋಗ್ಯ ವರ್ಧನೆ ಮತ್ತು ಮಾನಸಿಕ ನೆಮ್ಮದಿಯ ಜೊತೆಗೆ ಸೌಂದರ್ಯ ವೃದ್ಧಿಯೂ ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ ಹೇಳಿದ್ದಾರೆ.

ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಸೂಕ್ತ ಆವರಣ ಗೋಡೆ ನಿರ್ಮಿಸಲು ಸರ್ಕಾರ ಅನುದಾನ ನೀಡುವ ಅವಶ್ಯಕತೆ ಇದೆ ಎಂದರು.
ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಎಂ.ದುರ್ಗಾದಾಸ ಶೆಟ್ಟಿ ಮಾವಂತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳ ಜೊತೆಗೆ ಅವರಿಗೆ ಮೂಲಭೂತ ಸೌಕರ್ಯ ಒದಗಿಸಲು ರೋಟರಿ ಕ್ಲಬ್ ಅವಿರತ ಶ್ರಮಿಸುತ್ತಿದೆ ಎಂದರು.
ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವಸಂತ ಕುಮಾರ್ ಅಣ್ಣಳಿಕೆ, ದೈಹಿಕ ಶಿಕ್ಷಣ ಪರಿವೀಕ್ಷಕಿ ರತ್ನಾವತಿ, ಕೊಯಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ವೇದಾನಂದ ಕಾರಂತ ಮತ್ತಿತರರು ಶುಭ ಹಾರೈಸಿದರು.
ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಜಗದೀಶ್, ಜಿಲ್ಲಾ ಸಂಘದ ಗೌರವ ಸಲಹೆಗಾರ ಗಂಗಾಧರ ರೈ ಮಾಣಿ, ಸಿಆರ್ಪಿ ಸತೀಶ್ ಪೆರ್ನೆ, ನೋಡೆಲ್ ಶೋಭಾ, ಚಿಕತ್ರಕಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಆರ್.ಚೆನ್ನಕೇಶವ, ಗ್ರಾಮ ಪಂಚಾಯಿತಿ ಸದಸ್ಯರಾದ ಹರೀಶ ಆಚಾರ್ಯ, ರಾಘವ ಅಮೀನ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ಬೆಟ್ಟು, ಪರಮೇಶ್ವರ ಪೂಜಾರಿ, ಜಿ.ದಾಮೋದರ ಬಂಗೇರ, ಗಿರೀಶ ಶೆಟ್ಟಿ, ರಾಜೇಶ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ತಾಲ್ಲೂಕಿನ ಐದು ವಲಯ ಮಟ್ಟದಿಂದ 150ಕ್ಕೂ ಮಿಕ್ಕಿ ಮಂದಿ ಸ್ಪರ್ಧಿಗಳು ಪಾಲ್ಗೊಂಡಿದ್ದರು.
ಕಾರ್ಯಕ್ರಮವನ್ನು ಮುಖ್ಯಶಿಕ್ಷಕ ಸುಧೀರ್ ಜಿ.ಸ್ವಾಗತಿಸಿ, ಶಿಕ್ಷಕ ರಮೇಶ ಮಯ್ಯ ನಿರೂಪಿಸಿದರು. ದೈಹಿಕ ಶಿಕ್ಷಕ ಜನಾರ್ದನ ರಾಯಿ ವಂದಿಸಿದರು.
