ಮೂಡುಬಿದಿರೆ: ದ.ಕ. ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಚೇರಿ ಮೂಡುಬಿದಿರೆ ವಲಯ ದ.ಕ. ಹಾಗೂ ರೋಟರಿ ವಿದ್ಯಾ ಸಂಸ್ಥೆ ಮೂಡಬಿದಿರೆ ಇವರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

vollyball (2)
ರೋಟರಿ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ನಾರಾಯಣ ಪಿ.ಎಂ ಪಂದ್ಯಾಟಕ್ಕೆ ಚಾಲನೆ ನೀಡಿದರು.

vollyball (1)
ರೋಟರಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಅಮರನಾಥ ಶೆಟ್ಟಿ ಅಧ್ಯಕ್ಷತೆವಹಿಸಿದರು. ಈ ಸಂದರ್ಬದಲ್ಲಿ ಕ್ಷೇತ್ರ ಶಿಕ್ಷಾಣಾಧಿಕಾರಿ ಆಶಾ, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಾನಂದ ಕಾಯ್ಕಿಣಿ, ಶಾಲಾ ಸಂಚಾಲಕ ಡಾ. ಯತಿಕುಮಾರಸ್ವಾಮಿ ಗೌಡ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ರೋಟರಿ ವಿದ್ಯಾ ಸಂಸ್ಥೆಗಳ ಪ್ರಾಂಶುಪಾಲ ವಿನ್ಸೆಂಟ್ ಡಿಕೋಸ್ತ, ಮುಖ್ಯ ಶಿಕ್ಷಕರಾದ ಗಜಾನನ ಮರಾಠ, ನ್ಯಾನ್ಸಿ ರೋಡ್ರಿಗಸ್ ಉಪಸ್ಥಿತರಿದ್ದರು. ರೋಟರಿ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಶುಭಕರ್ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *