ಹೆಬ್ರಿ : ಶಿವಪುರ ಗ್ರಾಮದ ದೇವಸ್ಥಾನಬೆಟ್ಟು ನಿವಾಸಿ ಅನಿಲ್ ಕುಮಾರ್ (37) ಎಂಬವರು ಮಂಗಳೂರಿಗೆ ಕೆಲಸಕ್ಕೆಂದು ಹೋದವರು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ.
ಆಗಸ್ಟ್ 28ರಂದು ಮಂಗಳೂರಿನ ಖಾಸಗಿ ಸಂಸ್ಥೆಯ ಸರಕನ್ನು ಲಾರಿಯಲ್ಲಿ ತುಂಬಿಸಿಕೊಂಡು ಬೆಂಗಳೂರಿನ ಕಡೆಗೆ ಹೋಗುವುದಾಗಿ ತಿಳಿಸಿದ್ದು, ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಅನಿಲ್ ಕುಮಾರ್ ಪತ್ನಿ ಸಂಧ್ಯಾ ಹೆಬ್ರಿ ಪೊಲೀಸರಿಗೆ ದೂರು ನೀಡಿದ್ದಾರೆ.

