ಮೂಡುಬಿದಿರೆ: ಶ್ರೀ ಸತ್ಯನಾರಾಯಣ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎಸ್.ಎನ್. ಪಬ್ಲಿಕ್ ಸ್ಕೂಲ್ ನಿಡ್ಡೋಡಿ ಇದರ ಸಂಯುಕ್ತ ಆಶ್ರಯದಲ್ಲಿ ಮುದ್ದು ಕೃಷ್ಣ ಸ್ಪರ್ಧೆಯು ಶಾಲೆಯ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕ ಯದು ನಾರಾಯಣ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಿ.ಆರ್. ಪ್ರಸಾದ್, ಗಂಗಾಧರ ಶೆಟ್ಟಿ, ಶ್ಯಾಮಸುಂದರ್, ಮಂಜುನಾಥ ಪ್ರಸಾದ್, ಸಾವಿತ್ರಿ ಪ್ರಭು, ಸಾರಿಕಾ ಶೆಟ್ಟಿ, ಗಣಿತಾ ಮುಖ್ಯ ಅತಿಥಿಯಾಗಿದ್ದರು.
ಈ ಸ್ಪರ್ಧೆಯಲ್ಲಿ ಒಟ್ಟು 85 ಮಕ್ಕಳು ಭಾಗವಹಿಸಿದ್ದರು.
ಸಂಸ್ಥೆಯ ಸಂಚಾಲಕ ಜೋಕಿಮ್ ಕೊರೆಯಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎಸ್.ಎನ್.ಪಬ್ಲಿಕ್ ಸ್ಕೂಲ್ನ ಮುಖ್ಯ ಶಿಕ್ಷಕ ಲಕ್ಷ್ಮಣ ಆಕಾಶೆ ಸ್ವಾಗತಿಸಿದರು. ಶೋಭಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ರಮ್ಯಾ ವಂದಿಸಿದರು.
