ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶ್ರೀ ಸತ್ಯಸಾಯಿ ಪದವಿಪೂರ್ವ ಕಾಲೇಜು, ಅಳಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಚೆಸ್ ಪಮದ್ಯಾಟ ನಡೆಯಿತು.

ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಆಳ್ವಾಸ್ ಬಾಲಕರ ತಂಡವು ಪ್ರಶಸ್ತಿಯನ್ನು ಪಡೆದುಕೊಂಡಿತು. ಆಳ್ವಾಸ್‍ನ ಅನೂಪ್ ದ್ವಿತೀಯ, ದರ್ಶನ್ ನಾಲ್ಕನೇ ಸ್ಥಾನ ಪಡೆದು, ರಾಯಚೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
