ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಮತ್ತು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ವಿಟ್ಲ ವಲಯ ಇದರ ನಂದಿನಿ, ಸಂಗಮ ಮತ್ತು ಜ್ಞಾನಗಂಗಾ ಜ್ಞಾನವಿಕಾಸ ಕೇಂದ್ರಗಳ ವಾರ್ಷಿಕೋತ್ಸವ ಕಾರ್ಯಕ್ರಮವು ವಿಟ್ಲ ಪೊನ್ನೋಟ್ಟು ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿ ಉದ್ಘಾಟಿಸಿದರು.
ಸಭಾಧ್ಯಕ್ಷತೆಯನ್ನು ವಿಟ್ಲ ಯೂತ್ ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ಚಂದ್ರಹಾಸ ಸುವರ್ಣ ವಹಿಸಿದ್ದರು.

varshikothsava
ಮುಖ್ಯ ಅತಿಥಿಗಳಾಗಿ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಜಯಾ ರೈ, ಸ್ವಸಹಾಯ ಒಕ್ಕೂಟ ವಿಟ್ಲದ ವಲಯಾಧ್ಯಕ್ಷ ಜನಾರ್ಧನ ಪದ್ಮಶಾಲಿ ಮತ್ತು ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಸುಧಾ ಜೋಷಿ ಇವರು ಭಾಗವಹಿಸಿದ್ದರು. ವಲಯ ಮೇಲ್ವಿಚಾರಕಿ ಪ್ರೇಮ ಮತ್ತು ಸಮನ್ವಯಾಧಿಕಾರಿ ಸ್ವಪ್ನ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಗಮ ಜ್ಞಾನವಿಕಾಸ ಕೇಂದ್ರದ ಸದಸ್ಯೆ ಮಧುಶ್ರೀ ಸ್ವಾಗತಿಸಿದರು. ನಂದಿನಿ ಜ್ಞಾನವಿಕಾಸ ಕೇಂದ್ರದ ಸದಸ್ಯೆ ಕಾವೇರಿ ವಂದಿಸಿದರು. ಜ್ಞಾನಗಂಗಾ ಜ್ಞಾನಿವಿಕಾಸ ಕೇಂದ್ರದ ಸದಸ್ಯೆ ಧಮಯಂತಿ ನಿರೂಪಿಸಿದರು. ಈ ಸಂದರ್ಭದಲ್ಲಿ ಸದಸ್ಯೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ನಂತರ ಸದಸ್ಯೆಯರಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

By Suddi9

Leave a Reply

Your email address will not be published. Required fields are marked *