ಮೂಡುಬಿದಿರೆ: ಪ್ರಾಂತ್ಯ, ಹಾಗೂ ಲಾಡಿಯಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ, ವಿದ್ಯಾರ್ಥಿನಿಲಯಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ ನೀಡಿದ
ಅಲ್ಲಿನ ಕುಂದುಕೊರತೆಗಳ ಬಗ್ಗೆ ಪರಿಶೀಲನೆ ನಡೆಸಿದರು.

mla visit-govt hostel
ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸುವ ಸಂದರ್ಭದಲ್ಲಿ ಗುಣಮಟ್ಟದ ಊಟ, ತಿಂಡಿಗಳ ಒದಗಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು. ಸೋರುವ ಮೇಲ್ಛಾವಣಿ ಸರಿಪಡಿಸುವಂತೆ ವಾರ್ಡನ್‍ಗೆ ಶಾಸಕರು ಸೂಚಿಸಿದರು. ಮಂಗಳೂರಿನಲ್ಲಿ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ಕಲಿಯುತ್ತಿರುವ ವಿದ್ಯಾರ್ಥಿನಿಯೊಬ್ಬಳಿದ್ದು, ಅವಳಿಗೆ ಅನುಕೂಲವಾಗುವಂತೆ ಮಂಗಳೂರಿನಲ್ಲೇ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ದಿನೇಶ್ ಪೂಜಾರಿ, ಪ್ರಸಾದ್ ಕುಮಾರ್, ಉದ್ಯಮಿಗಳಾದ ಮೇಘನಾಥ ಶೆಟ್ಟಿ, ಜೋಯ್ಲಸ್ ಡಿಸೋಜ ಉಪಸ್ಥಿತರಿದ್ದರು.

 

By suddi9

Leave a Reply

Your email address will not be published. Required fields are marked *