ಬೆಂಗಳೂರು: ಕಿರಿಕ್ ಪಾರ್ಟಿ ಹಾಗೂ ಸ.ಹಿ,ಪ್ರಾ.ಶಾಲೆ ಕಾಸರಗೋಡು ಸಿನಿಮಾ ನಿರ್ದೇಶಿಸಿ ಸ್ಯಾಂಡಲ್‍ವುಡ್‍ನಲ್ಲಿ ಹೊಸ ಅಲೆ ಎಬ್ಬಿಸಿದ ನಿರ್ದೇಶಕ ರಿಷಬ್ ಶೆಟ್ಟಿ ‘ಬೆಲ್ ಬಾಟಂ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿ ಬಣ್ಣ ಹಚ್ಚುತ್ತಿದ್ದು, ಚಿತ್ರದ ಶೂಟಿಂಗ್ ಭರದಿಂದ ನಡೆಯುತ್ತದೆ.

bell bottom
ಈಗ ಗೌರಿ ಗಣೇಶ ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ‘ಬೆಲ್ ಬಾಟಂ’ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಇದೊಂದು 1980ರ ದಶಕದ ಪತ್ತೆದಾರಿ ಕಥೆಯೊಳನ್ನೊಳಗೊಂಡ ಸಿನಿಮಾವಾಗಿದ್ದು, ಈ ಸಿನಿಮಾದಲ್ಲಿ ನಿರ್ದೇಶಕ ರಿಶಬ್ ಶೇಟ್ಟಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಹರಿಪ್ರಿಯಾ ನಾಯಕಿಯಾಗಿ ತೆರೆ ಮೇಲೆ ಮಿಂಚಲಿದ್ದಾರೆ. ಅಂದಹಾಗೆ, ಎಲ್ಲ ಅಂದುಕೊಂಡಂತೆ ಆದರೆ ನವೆಂಬರ್‍ನಲ್ಲಿ ಬೆಲ್ ಬಾಟಂ ಚಿತ್ರ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

By suddi9

Leave a Reply

Your email address will not be published. Required fields are marked *