ಬಂಟ್ವಾಳ: ಸಮಾಜದಲ್ಲಿ ಸೋಲನ್ನು ಹಿಮ್ಮೆಟ್ಟಿ ನಿಂತು ಗೆಲುವು ಸಾಧಿಸಲು ಸ್ಪರ್ಧಾತ್ಮಕ ಮನೋಭಾವದಿಂದ ಬದುಕಿನ ವಿಕಸನ ಸಾಧ್ಯವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ. ನಾಗಪ್ಪ ಗೌಡ ಆರ್. ಎಂದು ತಿಳಿಸಿದರು.

svs
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಶೈಕ್ಷಣಿಕ ಸ್ಪರ್ಧೆ ವಿಕಾಸ್ -2018 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪದವಿ ಕಾಲೇಜು ಉಪಪ್ರಾಂಶುಪಾಲೆ ಡಾ. ಸುಜಾತ ಎಚ್. ಆರ್. ಕಾರ್ಯಕ್ರಮದ ಅಧ್ಯಕ್ಷತೆ ಮಾತನಾಡಿ, ಸೋಲು -ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದರು.
ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು.
ಜಿಲ್ಲೆಯ ಒಟ್ಟು 27 ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡರು..
ಉಪನ್ಯಾಸಕಿ ಚೈತ್ರ ಆರ್. ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮವನ್ನು ಪ್ರಾಂಶುಪಾಲೆ ಶಶಿಕಲಾ ಕೆ. ಸ್ವಾಗತಿಸಿ, ಉಪನ್ಯಾಸಕಿ ಭಾರತಿ ಪಿ. ವಂದಿಸಿದರು. ಉಪನ್ಯಾಸಕಿ ಅಪರ್ಣ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *