ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಇದರ 2018-19 ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಡಾ| ಚರಣ್ ಕಜೆ ಮಾತನಾಡಿ, ಯುವ ಜನತೆ ನಿರಂತರ ಚಟುವಟಿಕೆಗಳಲ್ಲಿ ತೊಡಗಿಕೊಂಡಾಗ ಬದುಕಿನ ವಿವಿಧ ಮೌಲ್ಯಗಳ ಅರಿವು ಸಾಧ್ಯ. ಇಂತಹ ಮೌಲ್ಯಗಳನ್ನು ಕಲಿಸುವ ಈ ಯೋಜನೆಯು ನಿಮ್ಮ ಮುಂದಿನ ಬದುಕಿಕೆ ದಾರಿದೀಪವಾಗಲಿ ಎಂದರು.
ಮುಖ್ಯ ಅತಿಥಿಗಳಾಗಿ ವಿಠಲ ವಿದ್ಯಾ ಸಂಘದ ಕಾರ್ಯದರ್ಶಿ ಯಶವಂತ ವಿಟ್ಲ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಚೇತನ್ ಜೈನ್, ಉಪನ್ಯಾಸಕ ಪ್ರಶಾಂತ್ ಕೆ ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎನ್ ಎಸ್ ಎಸ್ ಅಧಿಕಾರಿ ಅಣ್ಣಪ್ಪ ಸಾಸ್ತಾನ ಪ್ರಸ್ತಾವಿಸಿ ಸ್ವಾಗತಿಸಿದರು. ಮಧು ಶೆಟ್ಟಿ ವಂದಿಸಿದರು. ಚೈತನ್ಯಾ ನಿರೂಪಿಸಿದರು.
