ಮೂಡುಬಿದಿರೆ: ಜಮೀಯ್ಯತ್ತುಲ್ ಫಲ್ಹಾಃ ಮೂಡುಬಿದಿರೆ ಘಟಕದ ವತಿಯಿಂದ ಮುಸ್ಲಿಂ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪ್ರೋತ್ಸಾಹ ಧನ ಹಾಗೂ ಸನ್ಮಾನ ಸಮಾರಂಭ ಎಂ.ಸಿ.ಎಸ್ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.

jammiyathhul phalah (2)
ದ.ಕ ಮತ್ತು ಉಡುಪಿ ಜಿಲ್ಲೆಯ ಜಮೀಯ್ಯತ್ತುಲ್ ಫಲ್ಹಾಃನ ಅಧ್ಯಕ್ಷರಾದ ಶಾಹೂಲ್ ಹಮೀದ್ ಕೆ.ಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಪ್ರಗತಿಗಾಗಿ ಕೆಲವೊಂದು ಸಂಘ ಸಂಸ್ಥೆಗಳು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿದ್ಯಾರ್ಥಿ ವೇತನ ನೀಡುತ್ತಾರೆ. ಅದನ್ನು ಇಂದಿನ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಅಲ್ಲದೆ ಇತರ ವಸ್ತುಗಳಿಗಾಗಿ ದುಂದುವೆಚ್ಚ ಮಾಡುತ್ತಾರೆ. ಈ ನಿಟ್ಟಿನಲ್ಲಿ ಮಕ್ಕಳ ಹೆತ್ತವರು ಗಮನ ಹರಿಸಿ ಎಚ್ಚರಿಸಬೇಕು. ಇಂತಹ ಸಂಸ್ಥೆಗಳಿಂದ ಪ್ರೋತ್ಸಾಹ ಪಡೆದ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರಿದಾಗ ಇವರನ್ನು ಕೃತಜ್ಞತೆ ಸಲ್ಲಿಸುವ ಮನೋಭಾವ ಹೊಂದಿರಬೇಕು ಎಂದು ಜೈನ್ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಮುನಿರಾಜ ರೆಂಜಾಳ ಹೇಳಿದರು.
ಇಂತಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಜಮೀಯ್ಯತ್ತುಲ್ ಫಲ್ಹಾಃ ಸಂಸ್ಥೆಯನ್ನು ಅಭಿನಂದಿಸಿದರು.

vidyarthi vethana (2)
ಮೂಡುಬಿದಿರೆ ತಹಶೀಲ್ದಾರ್ ರಶ್ಮಿ ಎಸ್.ಆರ್ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಶಿಕ್ಷಣ ಅತೀ ಮುಖ್ಯ. ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆದು ಮುಂದೆ ಏನು ಆಗಬೇಕೆಂಬುದರ ಬಗ್ಗೆ ಅರಿವು ನಿಮ್ಮಲ್ಲಿರಬೇಕು ಹೊರತು ಯಾರದೋ ಆಯ್ಕೆಯ ಶಿಕ್ಷಣ ನಿಮ್ಮದಾಗಬಾರದು ಎಂದು ಸಲಹೆ ನೀಡಿದರು.
ಬಳಿಕ 56 ವಿದ್ಯಾರ್ಥಿಗಳಿಗೆ ತಲಾ 2 ಸಾವಿರದಂತೆ 1.12 ಲಕ್ಷ ರೂ ಪ್ರೋತ್ಸಾಹಧನವನ್ನು ವಿತರಿಸಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 604 ಅಂಕಗಳನ್ನು ಗಳಿಸಿ ಜಿಲ್ಲೆಯಲ್ಲಿ 2ನೇ ಸ್ಥಾನವನ್ನು ಗಳಿಸಿರುವ ರಿಫಾ ಜೈನಾಬ್ ಅವರನ್ನು ಸನ್ಮಾನಿಸಲಾಯಿತು.

jammiyathhul phalah (1)
ಮೂಡುಬಿದಿರೆ ಬದ್ರಿಯಾ ಜುಮ್ಮಾ ಮಸೀದಿಯ ಧರ್ಮಗುರು ಮುಸ್ತಫಾ ಯಮಾನಿ ದುವಾ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಮೀಯ್ಯತ್ತುಲ್ ಫಲ್ಹಾನ ಅವಿಭಜಿತ ದ.ಕ ಜಿಲ್ಲೆಯ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ಮೂಡುಬಿದಿರೆ ಪತ್ರಕರ್ತರ ಸಂಘದ ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು, ಜಿಲ್ಲಾ ಘಟಕದ ಮಹಮ್ಮದ್ ರಫೀಕ್, ಕಾರ್ಕಳ ಘಟಕದ ಕಾರ್ಯದರ್ಶಿ ಸುಲೈಮಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಸಿ.ಹೆಚ್ ಗಫೂರ್ ಸ್ವಾಗತಿಸಿದರು. ಜಮೀಯ್ಯತ್ತುಲ್ ಫಲ್ಹಾನ ಮೂಡುಬಿದಿರೆ ಘಟಕದ ಅಧ್ಯಕ್ಷ ಸಲೀಂ ಹಂಡೇಲು ಕಾರ್ಯಕ್ರಮ ನಿರೂಪಿಸಿದರು. ಮಹಮ್ಮದ್ ಶರೀಫ್ ವಂದಿಸಿದರು

By Suddi9

Leave a Reply

Your email address will not be published. Required fields are marked *