ವಿಟ್ಲ: ಮಾದರಿ ಶಾಲೆಯಲ್ಲಿ ನಡೆದ ದ ಕ ಜಿಲ್ಲಾ ದಲಿತ್ ಸೇವಾ ಸಮಿತಿಯ ಮಾಸಿಕ ಸಭೆಯಲ್ಲಿ 2018-19 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಜಿಲ್ಲಾಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡು ಶಾಲು ಹೊದಿಸಿ ಅಂಬೇಡ್ಕರ್ ಭಾವ ಚಿತ್ರ ನೀಡಿ ಗೌರವಿಸಿದರು.
ಸಂಘಟನೆಯ ಗೌರವಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ, ಉಪಾಧ್ಯಕ್ಷ ಮೋಹನ್ ಕಡಬ, ಸಂಘಟನಾ ಕಾರ್ಯದರ್ಶಿಗಳಾದ ಧನಂಜಯ ಬಳ್ನಾಡ್ ಮತ್ತು ಕೀರ್ತಿ ಕುಮಾರಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ದಡ್ಡಲತ್ತಡ್ಕ, ವಿಧ್ಯಾರ್ಥಿ ಸಂಘಟನೆ ಅಧ್ಯಕ್ಷೆ ದಿವ್ಯಶ್ರೀ ಕಲ್ಲಜೇರ ಉಪಸ್ಥಿತರಿದ್ದರು.
ಜಿಲ್ಲಾ ಸಂಚಾಲಕ ಗೋಪಾಲ್ ನೇರಳಕಟ್ಟೆ ಸ್ವಾಗತಿಸಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಸಾದ್ ಅನಂತಾಡಿ ವಂದಿಸಿದರು. ಜಿಲ್ಲಾ ಉಪಾಧ್ಯಕ್ಷ ಪ್ರಸಾದ್ ಬೊಳಮಾರ್ ನಿರೂಪಿಸಿದರು,
