ವಿಟ್ಲ: ದ ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ದ ಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ವಿಠಲ ವಿದ್ಯಾ ಸಂಘ ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಇಲಾಖ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ನೆಟ್ಬಾಲ್ ಪಂದ್ಯಾಟವು ವಿಠಲ ಪ್ರೌಢ ಶಾಲೆಯಲ್ಲಿ ನಡೆಯಿತು.
ಈ ಪಂದ್ಯಾಟವನ್ನು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ಉದ್ಘಾಟಿಸಿದರು. ವಿಠಲ ವಿದ್ಯಾ ಸಂಘದ ಕೋಶಾಧಿಕಾರಿ ನಿತ್ಯಾನಂದ ನಾಯಕ್ ಅಧ್ಯಕ್ಷತೆ ವಹಿಸಿದ್ದರು, ಸದಸ್ಯರುಗಳಾದ ಬಾಬು ಕೊಪ್ಪಳ ಮತ್ತು ಪದ್ಮಯ್ಯ ಗೌಡ, ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಉದ್ಯಮಿ ಸುಭಾಸ್‍ಚಂದ್ರ ನಾಯಕ್, ಬಾಲಕೃಷ್ಣ ವಿಟ್ಲ, ಮರಿನಾ ಮಿನೇಜಸ್ ಮೊದಲಾದವರು ಉಪಸ್ಥಿತರಿದ್ದರು.
