ವಿಟ್ಲ: ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ(ಆಡಳಿತ) ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರ ವಲಯ ಮತ್ತು ವಿದ್ಯಾದಾಯಿನಿ ಸಮೂಹ ಶಿಕ್ಷಣ ಸಂಸ್ಥೆಗಳು ಸುರತ್ಕಲ್ ಮಂಗಳೂರು ಇವರ ಸಹಯೋಗದಲ್ಲಿ ನಡೆದ ಪ್ರಾಥಮಿಕ ವಿಭಾಗದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕೋಲಾಟ ಸ್ಪರ್ಧೆಯಲ್ಲಿ ದ.ಕ.ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನಗಳಿಸಿರುತ್ತಾರೆ. ಮುಖ್ಯೋಪಾಧ್ಯಾಯರು ಹಾಗೂ ಸಹಶಿಕ್ಷಕರ ಜೊತೆಗೆ ವಿದ್ಯಾರ್ಥಿಗಳ ತಂಡ.
