ಮೂಡುಬಿದಿರೆ: ದರೆಗುಡ್ಡೆ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಮೂಡಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ದರೆಗುಡ್ಡೆ ಸರ್ಕಾರಿ ಪ್ರೌಢಶಾಲೆ ಇವುಗಳ ಸಹಯೋಗದಲ್ಲಿ ನಡೆದ ಮೂಡುಬಿದಿರೆ ತಾಲೂಕು ಮಟ್ಟದ 2018-19ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕರು ಮತ್ತು ಬಾಲಿಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಡಿ.ಜೆ. ಆಂಗ್ಲಮಾಧ್ಯಮ ಶಾಲೆ ಮತ್ತು ದರೆಗುಡ್ಡೆ ಸರ್ಕಾರಿ ಪ್ರೌಢಶಾಲೆ ಅಗ್ರ ಸ್ಥಾನ ಗಳಿಸಿವೆ.
ಪ್ರಾಥಮಿಕ ಶಾಲಾ ಬಾಲಕರು ಮತ್ತು ಬಾಲಕಿಯರ ವಿಭಾಗಗಳೆರಡರಲ್ಲೂ ಡಿ.ಜೆ. ಆಂಗ್ಲಮಾಧ್ಯಮ ಶಾಲೆ ಪ್ರಥಮ ಸ್ಥಾನ ಗಳಿಸಿದ್ದು ಕೋಟೆ ಬಾಗಿಲು ಆಂಗ್ಲ ಮಾಧ್ಯಮ ಶಾಲೆ ಎರಡರಲ್ಲೂ ದ್ವಿತೀಯ ಸ್ಥಾನ ಗಳಿಸಿದೆ.

ಶಾಸಕ ಉಮಾನಾಥ ಕೋಟ್ಯಾನ್ ಪಂದ್ಯಾಟ ಉದ್ಘಾಟಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ ಪ್ರಸ್ತಾವನೆಗೈದರು. ಮುಖ್ಯಅತಿಥಿಗಳಾಗಿ ಜಿ.ಪಂ. ಸದಸ್ಯೆ ಕೆ.ಪಿ. ಸುಜಾತಾ, ಪಂ. ಸದಸ್ಯರಾದ ಸುಭಾಶ್ಚಂದ್ರ ಚೌಟ, ಸಂತೋಷ್, ಜಯಕುಮಾರ ಶೆಟ್ಟಿ, ಹರೀಶ, ಮೂಡಬಿದಿರೆ ರೋಟರಿ ಟೆಂಪಲ್‍ಟೌನ್ ಅಧ್ಯಕ್ಷ ವಿನ್ಸೆಂಟ್ ಡಿಕೋಸ್ತ, ಎಸ್‍ಡಿಎಂಸಿ ಅಧ್ಯಕ್ಷ ಅಶೋಕ ಶೆಟ್ಟಿ, ಉಪಾಧ್ಯಕ್ಷರು, ಸದಸ್ಯರು, ಪ್ರಾ.ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ್ ಪಾಲ್ಗೊಂಡಿದ್ದರು.
ವಲಯದ 4 ಪ್ರಾಥಮಿಕ ಹಾಗೂ 9 ಪ್ರೌಢಶಾಲಾ ತಂಡಗಳು ಭಾಗವಹಿಸಿದ್ದವು.
ದರೆಗುಡ್ಡೆ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕಿ ಅನ್ನಪೂರ್ಣೇಶ್ವರಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಶಶಿಕಾಂತ ಕೆ. ವಂದಿಸಿದರು. ಜಗದೀಶ ಮಡಿವಾಳ ನಿರೂಪಿಸಿದರು.
ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಆತಿಥೇಯ ದರೆಗುಡ್ಡೆ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ ಗಳಿಸಿದ್ದು ಕೋಟೆಬಾಗಿಲು ಮಹಮ್ಮದೀಯ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ ಗಳಿಸಿದೆ.
ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ದರೆಗುಡ್ಡೆ ಸರ್ಕಾರಿ ಪ್ರೌಢ ಶಾಲೆ ಪ್ರಥಮ, ಮೂಡಬಿದಿರೆ ಜೈನ್ ಹೈಸ್ಕೂಲು ದ್ವಿತೀಯ ಸ್ಥಾನ ಗಳಿಸಿದೆ.

