ದ ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ದ ಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ವಿಠಲ ವಿದ್ಯಾ ಸಂಘ ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಇಲಾಖ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ನೆಟ್ಬಾಲ್ ಪಂದ್ಯಾಟವು ವಿಠಲ ಪ್ರೌಢ ಶಾಲೆಯಲ್ಲಿ ನಡೆಯಿತು.nb r
17ರ ವಯೋಮಾನದ ಬಾಲಕರ ವಿಭಾಗ ಪ್ರಥಮ ಸೈಂಟ್ ರೇಮಂಡ್ಸ್ ಆಂಗ್ಲ ಮಾಧ್ಯಮ ಶಾಲೆ ವಾಮಂಜೂರು, ದ್ವಿತೀಯ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲ. 17ರ ಬಾಲಕಿಯರ ವಿಭಾಗ ಪ್ರಥಮ ಎ ಕೆ ಯು ಗುರುಕಂಬ್ಳ, ದ್ವಿತೀಯ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಪಡೆಯಿತು. 14 ರ ವಯೋಮಾನದ ಬಾಲಕರ ವಿಭಾ ಸೈಂಟ್ ರೇಮಂಡ್ಸ್ ಆಂಗ್ಲ ಮಾಧ್ಯಮ ಶಾಲೆ ವಾಮಂಜೂರು, ದ್ವಿತೀಯ ಸೇಕ್ರೆಡ್ ಹಾರ್ಟ್ ಕುಲಶೇಖರ. 14 ರ ಬಾಲಕಿಯರ ವಿಭಾಗ ಪ್ರಥಮ ಮೋರ್ನಿಂಗ್ ಸ್ಟಾರ್ ಬಜಪೆ ದ್ವಿತೀಯ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಪಡೆಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ರಘುನಾಥ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಕಾರ್ಯದರ್ಶಿ ಅಖಿಲ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಕಾರ್ಯದರ್ಶಿ ಜಯರಾಮ, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷನ ನಿರ್ದೇಶಕ ಪ್ರೇಮನಾಥ ಶೆಟ್ಟಿ, ದಿವಾಕರ ಶೆಟ್ಟಿ, ಶಾಲಿನಿ ಆತ್ಮಭೂಷಣ್, ವೀಠಲ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕಣ ನಿರ್ದೇಶಕ ಸುಚೇತನ್ ಜೈನ್, ಬಂಟ್ವಾಳ ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಸ್ವಾಗತಿಸಿ ವಂದಿಸಿದರು. ಸುರೇಶ್ ಶೆಟ್ಟಿ ನಿರೂಪಿಸಿದರು. ಮಲ್ಲಿಕಾ ಹೆಗ್ಡೆ ಸಹಕರಿಸಿದರು.

By suddi9

Leave a Reply

Your email address will not be published. Required fields are marked *