ಬಂಟ್ವಾಳ:ಇಲ್ಲಿನ ರೋಟರಿ ಕ್ಲಬ್ ಮತ್ತು ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ‘ವೃತ್ತಿ ಮಾರ್ಗದರ್ಶನ’ ಮತ್ತು ಬ್ಯಾಂಕಿಂಗ್ ಪರೀಕ್ಷೆ ತರಬೇತಿ ಕಾರ್ಯಗಾರ ಇದೇ 23ರಂದು ಅಪರಾಹ್ನ 2 ರಿಂದ 5 ಗಂಟೆತನಕ ಬಿ.ಸಿ.ರೋಡಿನ ರೋಟರಿ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಕಳೆದ 30 ವರ್ಷಗಳಿಂದ ಈ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವ ಅಂಕಣಕಾರ, ಮಂಗಳೂರು ಕಾರ್ಪೊರೇಶನ್ ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ಆರ್.ಕೆ. ಬಾಲಚಂದ್ರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು. ಮೊದಲು ಹೆಸರು ನೋಂದಾಯಿಸುವ 100 ಮಂದಿಗೆ ಮಾತ್ರ ಅವಕಾಶವಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9845669640 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
