ಮಂಗಳೂರು : ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿ ಇಟ್ಟುಕೊಂಡು ಪಕ್ಷ ಸಂಘಟನೆ ಮತ್ತು ವಿವಿಧ ಕಾರ್ಯ ಕ್ರಮಗಳನ್ನು ಅನುಷ್ಠಾನಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಂಟು ವಿಧಾನಸಭಾ ಕ್ಷೇತ್ರಕ್ಕೆ ವೀಕ್ಷಕರು ಹಾಗೂ ಪ್ರತಿ ಬ್ಲಾಕ್ ಸಮಿತಿಗಳಿಗೆ ಸಹ ವೀಕ್ಷಕರನ್ನು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರು ನೇಮಕ ಮಾಡಿದ್ದಾರೆ.

umar farooq (1)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಮ್ಮರ್ ಫಾರೂಕ್ ಫರಂಗಿಪೇಟೆ ರವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಡಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಸದಸ್ಯರು ಮತ್ತು 4 ಜಿಲ್ಲೆಯ ಚುನಾವಣಾ ಉಸ್ತುವಾರಿ ವೀಕ್ಷಕರಾಗಿ, ಪ್ರಸ್ತುತ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ವೀಕ್ಷಕರಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಛೇರಿ ಕಾರ್ಯದರ್ಶಿ ನಝೀರ್ ಬಜಾಲ್ ರವರು ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *