ಬೆಂಗಳೂರು: ಹಿರಿಯ ಪತ್ರಕರ್ತ ರವಿ ಬೆಳಗೆರೆಯವರಿಗೆ ಲಘು ಹೃದಯಾಘಾತವಾದ ಹಿನ್ನೆಲೆಯಲ್ಲಿ ಅವರನ್ನು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ರಾತಿಯ್ರ ವೇಳೇಗೆ ರವಿಬೆಳಗೆರೆಯವರಿಗೆ ತೀವ್ರ ಎದೆ ನೋವು ಕಾಣಿಸಿದ್ದು,ತಕ್ಷಣ ಅವರನ್ನು ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿ ಬೆಳಗೆರೆ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
