ಬಂಟ್ವಾಳ: ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪ್ರಶಿಕ್ಷಾ ಇವರು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪ. ಪೂ. ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದ ಹುಡುಗಿಯರ ವಿಭಾಗದಲ್ಲಿ ಆಯ್ಕೆಯಾಗಿ ಸೆ.24 ಸೋಮವಾರ ರಾಯಚೂರು ಜಿಲ್ಲೆಯಲ್ಲ್ಲಿ ನಡೆಯುವ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ದಕ್ಷಿಣಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.
ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗ ಹಾಗೂ ವಿದ್ಯಾರ್ಥಿಗಳ ಅಭಿನಂದಿಸಿದ್ದಾರೆ.
