ಬಂಟ್ವಾಳ: ಇಲ್ಲಿನ ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಮತ್ತು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಅ.17 ಮತ್ತು 18ರಂದು ನಡೆಯಲಿರುವ 16ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಅಣ್ಣಳಿಕೆಯಲ್ಲಿ ಭಾನುವಾರ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ರಂಜನ್ ಕುಮಾರ್ ಶೆಟ್ಟಿ, ಟ್ರಸ್ಟಿನ ಅಧ್ಯಕ್ಷ ಎಂ.ದುರ್ಗಾದಾಸ್ ಶೆಟ್ಟಿ ಮಾವಂತೂರು, ಪ್ರಧಾನ ಕಾರ್ಯದರ್ಶಿ ಡೊಂಬಯ ಬಿ.ಅರಳ, ಟ್ರಸ್ಟಿ ವಸಂತ ಕುಮಾರ್ ಅಣ್ಣಳಿಕೆ, ವಿಶ್ವನಾಥ ಗೌಡ, ಸಂತೋಷ್ ಕುಮಾರ್ ಬೆಟ್ಟು, ಉಮೇಶ ಡಿ.ಎಂ., ಹರೀಶ ಆಚಾರ್ಯ ರಾಯಿ, ಸತೀಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

