ಮೂಡುಬಿದಿರೆ: ಸೌತ್ ಕೆನರಾಫೋಟೋಗ್ರಾಫರ್ಸ್ ಅಸೋಸಿಯೇಷನ್ ಮೂಡುಬಿದಿರೆ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಯಲ್ಲಿನ ವಿದ್ಯಾರ್ಥಿಗಳ ವಿವಿಧ ಸ್ಪರ್ಧೆಗಳು ಮಂಗಳವಾರ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಚೌಟರ ಅರಮನೆಯ ಕುಲದೀಪ್ ಎಂ. ಉದ್ಘಾಟಿಸಿದರು. ವಲಯಾಧ್ಯಕ್ಷ ರವಿ ಕೋಟ್ಯಾನ್ ಅಧ್ಯಕ್ಷತೆ ವಹಿಸಿದರು.
ಈ ಸಂದರ್ಭದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಮೂಡುಬಿದಿರೆ ವಲಯ ಗೌರವಾಧ್ಯಕ್ಷ ಭಾನುಪ್ರಕಾಶ್ ರಾವ್, ಸ್ಫೂರ್ತಿ ಶಾಲೆಯ ಮುಖ್ಯಸ್ಥ ಪ್ರಕಾಶ್ ಶೆಟ್ಟಿಗಾರ್, ಶಾಲಾ ಮುಖ್ಯ ಶಿಕ್ಷಕಿ ಅನಿತಾ ರೋಡ್ರಿಗಸ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಮೂಡುಬಿದಿರೆ ವಲಯದ ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ ವಂದಿಸಿದರು. ವಿಲ್ಫ್ರೇಡ್ ಮೆಂಡೋನ್ಸಾ ಕಾರ್ಯಕ್ರಮ ನಿರೂಪಿಸಿದರು.
