ಮೂಡುಬಿದಿರೆ: ಆಳ್ವಾಸ್ ಪ.ಪೂ. ಕಾಲೇಜು ಇದರ ಎನ್ಎಸ್ಎಸ್ ಘಟಕದ ವತಿಯಿಂದ “ಸ್ವಚ್ಛತೆಯೇ ಸೇವೆ” ಎಂಬ ಶೀರ್ಷಿಕೆಯಲ್ಲಿ ಎನ್ಎಸ್ಎಸ್ ದಿನವನ್ನು ಸೋಮವಾರ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ದ.ಕ. ಜಿ.ಪಂ. ಸದಸ್ಯ ಸುಚರಿತ ಶೆಟ್ಟಿ ಚಾಲನೆ ನೀಡಿದರು.

ಇದರ ಅಂಗವಾಗಿ ಮಹತೋಭಾರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಾಲಯದ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸುಮಾರು 100 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾಲೇಜಿನ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಐ., ಯೋಜನಾಧಿಕಾರಿ ದಾಮೋದರ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
