ಮೂಡುಬಿದಿರೆ: ಶತಮಾನದ ಇತಿಹಾಸ ಹೊಂದಿರುವ ಶ್ರೀ ಮೂಡುಬಿದಿರೆ ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜು 1971ರಲ್ಲಿ ಸ್ಥಾಪಿಸಲ್ಪಟ್ಟು ಸುವರ್ಣ ಮಹೋತ್ಸವ ಆಚರಣೆಯ ಹೊಸ್ತಿಲಲ್ಲಿದೆ. ಇದರ ಪೂರ್ವಭಾವಿಯಾಗಿ ಸಂಸ್ಥೆಯ ಹಳೆವಿದ್ಯಾರ್ಥಿಗಳ ಸಮಾವೇಶವನ್ನು ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.

Old students meeting
ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಹಳೆವಿದ್ಯಾರ್ಥಿ ಹಾಗೂ ಸಂಚಾಲಕರಾದ ಕೆ. ಹೇಮರಾಜ್ ವಹಿಸಿ, ಮಾತನಾಡಿ, ಯಾವುದೇ ಸಂಸ್ಥೆಯ ಬೆಳವಣಿಗೆಯಲ್ಲಿ ಹಳೆವಿದ್ಯಾರ್ಥಿಗಳ ಪಾತ್ರ ಮಹತ್ವದ್ದು. ಹತ್ತು ಸಾವಿರಕ್ಕಿಂತಲೂ ಹೆಚ್ಚು ಸಂಖ್ಯೆಯ ಹಳೆ ವಿದ್ಯಾರ್ಥಿಗಳನ್ನು ಹೊಂದಿರುವ ಜೈನ ಪದವಿಪೂರ್ವ ಕಾಲೇಜು ತನ್ನ ಮೌಲ್ಯಯುತ ಶಿಕ್ಷಣ ಹಾಗೂ ಶಿಸ್ತಿಗೆ ಹೆಸರಾಗಿದ್ದು, ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕು ತೋರಿಸಿದೆ. ಮುಂದಿನ ನವೆಂಬರ್ 4ನೇ ತಾರೀಕಿನಂದು ಸಾಯಂಕಾಲ 4.00 ಗಂಟೆಗೆ ಸರಿಯಾಗಿ ಮತ್ತೆ ಹಳೆ ವಿದ್ಯಾರ್ಥಿಗಳ ಸಮಾವೇಶವನ್ನು ನಡೆಸಿ ಹಳೆವಿದ್ಯಾರ್ಥಿ ಸಂಘದ ರಚನೆ, ಅದರ ಕಾರ್ಯಚಟುವಟಿಕೆಗಳ ಕುರಿತು ಹಾಗು ಕಾಲೇಜಿನ ಸುವರ್ಣ ಮಹೋತ್ಸವದ ನೆನಪಿನಲ್ಲಿ ಕೈಗೊಳ್ಳಬೇಕಾದ ಶಾಶ್ವತ ಕಾರ್ಯಕ್ರಮಗಳ ಬಗ್ಗೆ ಚಿಂತಿಸಲಾಗುವುದು. ಇಲ್ಲಿ ಅಧ್ಯಯನ ಮಾಡಿರುವ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿದ್ದು, ಹೆಚ್ಚಿನ ಸಂಖ್ಯೆಯ ಹಳೆ ವಿದ್ಯಾರ್ಥಿಗಳನ್ನು ಮುಂದಿನ ದಿನಗಳಲ್ಲಿ ಸಂಪರ್ಕಿಸುವ ಪ್ರಯತ್ನವನ್ನು ನಡೆಸಲಾಗುವುದು ಎಂದು ಹೇಳಿದರು.
ಕಾಲೇಜಿನ ಆಡಳಿತಮಂಡಳಿಯ ಕಾರ್ಯದರ್ಶಿ ಅಭಿಜೀತ್ ಎಂ. ಮಾತನಾಡಿ, ಆಡಳಿತ ಮಂಡಳಿಯ ಎಲ್ಲಾ 5 ಶಿಕ್ಷಣ ಸಂಸ್ಥೆಗಳಲ್ಲಿ 3000ಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ವಿದ್ಯಾರ್ಜನೆ ನಡೆಸುತ್ತಿದ್ದು, ಕಾಲೇಜಿನ ಸುವರ್ಣ ಮಹೋತ್ಸವದ ನೆನಪಿನಲ್ಲಿ ಬೆಟ್ಕೇರಿ ಆಟದ ಮೈದಾನದಲ್ಲಿ ಕ್ರೀಡಾಪಟುಗಳಿಗೆ ಅನುಕೂಲವಾಗುವಂತೆ 200 ಮೀಟರ್ ಟ್ರ್ಯಾಕ್‍ನ್ನು ಅಳವಡಿಸುವ ಬಗ್ಗೆ ಚಿಂತಿಸಲಾಗುವುದು ಎಂದರು.
ಸಂಸ್ಥೆಯ ಹಳೆವಿದ್ಯಾರ್ಥಿಗಳಾದ ಶ್ರೀ ಧವಲಾ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಂ. ರವೀಶ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯ ರಮೇಶ್ ಶೆಟ್ಟಿ ಮಾರ್ನಾಡು, ಬ್ಯಾಂಕ್ ಉದ್ಯೋಗಿ ಶ್ರೀಕಾಂತ್, ಆಡಳಿತ ಮಂಡಳಿ ಕೋಶಾಧಿಕಾರಿ ರೋಹಿತ್ ಕುಮಾರ್, ಉದ್ಯಮಿ ಶ್ರೇಯಸ್ ಹೆಗ್ಡೆ, ಉಪನ್ಯಾಸಕಿ ಬಾಲಕಿ ಜೈನ್, ಅಜೇಯಕುಮಾರ್ ಮುಂತಾದವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ, ಸುವರ್ಣ ಮಹೋತ್ಸವದ ಚಟುವಟಿಕೆಗಳಿಗೆ ಸಹಕಾರದ ಭರವಸೆ ನೀಡಿದರು. ಆಡಳಿತ ಮಂಡಳಿಯ ಸದಸ್ಯ ಪೃಥ್ವಿರಾಜ್ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಚಾರ್ಯ ಶ್ರೀ ಮಧುಕರ್ ಸಾಲಿನ್ಸ್ ಸ್ವಾಗತಿಸಿ, ರಾಜಶಾಸ್ತ್ರ ಉಪನ್ಯಾಸಕ ಮಹಾವೀರ ಜೈನ್ ಎಂ. ಪ್ರಸ್ತಾಪಿಸಿ ನಿರೂಪಿಸಿದರು, ಪ್ರಭಾತ್ ಬಿ. ವಂದಿಸಿದರು. ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರರು ಸಹಕರಿಸಿದರು.

By suddi9

Leave a Reply

Your email address will not be published. Required fields are marked *