ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ, ಮಂಗಳೂರು ಹಾಗೂ ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರದಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಖೋ ಖೋ ಪಂದ್ಯಾಟದಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

Taluk Level Kho Kho
ಫೈನಲ್ ಪಂದ್ಯದಲ್ಲಿ ಆಳ್ವಾಸ್ ಬಾಲಕರ ತಂಡ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪಿ.ಯು. ಕಾಲೇಜಿನ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಆಳ್ವಾಸ್ ಬಾಲಕಿಯರ ತಂಡ ಪರಿಜ್ಞಾನ ಪಿ.ಯು. ಕಾಲೇಜು, ಸೋಮೇಶ್ವರ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆದುಕೊಂಡಿತು.

By suddi9

Leave a Reply

Your email address will not be published. Required fields are marked *