ಮಂಗಳೂರು : ಶಾಲಾ ದಿನಗಳಲ್ಲಿ ಶಿಕ್ಷಕರಿಂದ ದಂಡಿಸಿಕೊಂಡವರು ಜೀವನದಲ್ಲಿ ಹೆಚ್ಚಿನ ಯಶಸ್ವಿಗಳಾಗಿದ್ದಾರೆ, ಸಾಧನೆ ಮಾಡಿದವರು ಅನೇಕರಿದ್ದಾರೆ, ವಿದ್ಯಾರ್ಥಿಗಳು ಪಠ್ಯ ಮಾತ್ರವಲ್ಲ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು, ಹೆಚ್ಚು ಹೆಚ್ಚು ಚಟುವಟಿಕೆಯಿಂದಿರಬೇಕು ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು ಸದಾನಂದ ಆಳ್ವ ತೇವು ರವರು ನಿತ್ಯ ಸಹಾಯ ಮಾತಾ ಫ್ರೌಢಶಾಲೆ ಮೇರಮಜಲು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ದಕ್ಷಿಣ ವಲಯ ಇದರ ಸಹಯೋಗದೊಂದಿಗೆ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಲಯ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಗಳಾದ ಲಿಲ್ಲಿ ಪಾಯಸ್, ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ತುಪ್ಪೆಕಲ್ಲು, ಎಂಸಿಸಿ ಬ್ಯಾಂಕ್ ನ ಅಧ್ಯಕ್ಷರು ಹಾಗೂ ನಿತ್ಯ ಸಹಾಯ ಮಾತಾ ಫ್ರೌಢಶಾಲೆ ಮೇರಮಜಲು ಇದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅನಿಲ್ ಕುಮಾರ್ ಲೋಬೋ, ಗುಣಶ್ರೀ ವಿದ್ಯಾಲಯದ ಸಂಚಾಲಕರಾದ ರಾಧಕೃಷ್ಣ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಸಂಘಟನಾ ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೊಟ್ಟಿಂಜ, ನಿತ್ಯ ಸಹಾಯ ಮಾತಾ ಫ್ರೌಢ ಶಾಲೆ ಮುಖ್ಯೋಪಧ್ಯಾಯಿನಿ ಸಿಂಥಿಯಾ ಸಲ್ಡಾನ, ಶಾಲೆಯ ದೈಹಿಕ ಶಿಕ್ಷಕರಾದ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕಿ ಶಾರಲ್ ಪಿಂಟೋರವರು ಸ್ವಾಗತಿಸಿದರು. ಶಿಕ್ಷಕಿ ಫ್ಲಾರಿನ್ ರವರು ವಂದಿಸಿದರು.
