ಮೂಡುಬಿದಿರೆ: ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾರವರು ಮೂಡಬಿದ್ರಿ ಸಮೀಪದ ನೀರ್ಕೆರೆ ಸರಕಾರಿ ಪ್ರೌಢಶಾಲೆಯಲ್ಲಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಳುಗಳಿಗೆ ಹಾಗೂ ಶಾಲೆಗೆ ಸಿಗುವ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‍ನ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜರವರು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಆಶಾ, ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಬಾಲಕೃಷ್ಣ ದೇವಾಡಿಗ, ಶಾಲಾ ಶಿಕ್ಷಕರು ಮತ್ತು ಸಿಬಂದಿವರ್ಗದವರು ಉಪಸ್ಥಿತರಿದ್ದರು.
