ಬಂಟ್ವಾಳ:ಈ ಹಿಂದೆ ರಾಜ್ಯದಲ್ಲಿ ಪ್ರಥಮ ಬಾರಿಗೆ 94 ಸಿ ಹಕ್ಕುಪತ್ರ ವಿತರಿಸಿದ ಹೆಗ್ಗಳಿಕೆ ಹೊಂದಿರುವ ಅಮ್ಟಾಡಿ ಗ್ರಾಮ ಪಂಚಾಯಿತಿ ಇದೀಗ ಜನಪರ ಕಾಳಜಿಯಿಂದ ಅವಕಾಶ ವಂಚಿತರಿಗೆ ಮತ್ತೆ 94 ಸಿಸಿ ಹಕ್ಕುಪತ್ರ ಮತ್ತಿತರ ಸೌಲಭ್ಯ ನೀಡುವಲ್ಲಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ತಾಲ್ಲೂಕಿನ ಅಮ್ಟಾಡಿ ಗ್ರಾಮ ಪಂಚಾಯಿತಿನಲ್ಲಿ ಅರ್ಹ ಫಲಾನುಭವಿಗಳಿಗೆ ಶುಕ್ರವಾರ ಸಂಜೆ 94 ಸಿಸಿ ಹಕ್ಕುಪತ್ರ ಮತ್ತಿತರ ಸೌಲಭ್ಯ ವಿತರಿಸಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ವಿವಿಧ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ದೊರಕಿಸಿ ಕೊಡುವಲ್ಲಿ ಪಂಚಾಯಿತಿ ಜವಾಬ್ದಾರಿ ಮಹತ್ತರವಾಗಿದೆ ಎಂದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ ಶೆಟ್ಟಿ ಪಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಲ್ಲಿಕಾ ವಿ.ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಯಶೋಧ ಮತ್ತಿತರರು ಶುಭ ಹಾರೈಸಿದರು.
ಇದೇ ವೇಳೆ ಅಮ್ಟಾಡಿ ಮತ್ತು ಕುರಿಯಾಳ ಗ್ರಾಮಕ್ಕೆ ಸಂಬಂಧಿಸಿದಂತೆ 30 ಮಂದಿ ಫಲಾನುಭವಿಗಳಿಗೆ 94 ಸಿಸಿ ಹಕ್ಕುಪತ್ರ, 44 ಮಂದಿ ವಿಕಲಚೇತನರಿಗೆ ವೈದ್ಯಕೀಯ ವೆಚ್ಛ, 35ಮಂದಿ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾಥರ್ಿಗಳಿಗೆ ವಿದ್ಯಾಥರ್ಿವೇತನ, 60 ಮಂದಿಗೆ ಸಂಧ್ಯಾ ಸುರಕ್ಷಾ ಆದೇಶಪತ್ರ, ರಾಷ್ಟ್ರೀಯ ಕುಟುಂಬ ಸಹಾಯಧನ-4, ಅಂತ್ಯಸಂಸ್ಕಾರ-4, ಪ್ರಾಕೃತಿಕ ವಿಕೋಪ ಯೋಜನೆಯಡಿ 17 ಮಂದಿಗೆ ಚೆಕ್ ವಿತರಿಸಲಾಯಿತು. ಕಾರ್ಯದಶರ್ಿ ಲಕ್ಷ್ಮೀನಾರಾಯಣ ಮತ್ತು ಲೆಕ್ಕ ಸಹಾಯಕ ಭಾಸ್ಕರ ಫಲಾನುಭವಿಗಳನ್ನು ಪರಿಚಯಿಸಿದರು.
ಇದೇ ವೇಳೆ ಶಾಸಕರನ್ನು ಸನ್ಮಾನಿಸಲಾಯಿತು. ಗ್ರಾಮಕರಣಿಕರಾದ ಎನ್.ಸಿ.ಶಶಿಕುಮಾರ್, ಅಮೃತಾಂಶು, ಸಹಾಯಕರಾದ ಲೋಕನಾಥ್, ಸಂದೀಪ್ ಕುರಿಯಾಳ ಮತ್ತಿತರರು ಇದ್ದರು.ಕಂದಾಯ ನಿರೀಕ್ಷಕ ನವೀನ್ ಕುಮಾರ್ ಬೆಂಜನಪದವು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಪಿಡಿಒ ಬಿ.ಮಹಮ್ಮದ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
