ಮೂಡುಬಿದಿರೆ: ಮಹಾತ್ಮ ಗಾಂಧೀಜಿಯವರು ಗತಿಸಿ ಮೂರು ತಲೆಮಾರುಗಳು ಕಳೆದರು ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದೆ ಎಂದುಮಹಾವೀರ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ ಹೇಳಿದರು.
ಇಲ್ಲಿನ ಮಹಾವೀರ ಕಾಲೇಜಿನಲ್ಲಿ ನಡೆದ ಎಸ್‍ಡಿ ಸಾಮ್ರಾಜ್ಯ ಸ್ಮಾರಕ ಮಂಗಳೂರು ವಿವಿ. ಅಂತರ್ ಕಾಲೇಜು ಮಟ್ಟದ `ಗಾಂಧೀಜಿ ವಿಚಾರಧಾರೆ’ ಭಾಷಣ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಶಾಸಕ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಾಂಧೀಜಿಯವರ ಅಹಿಂಸಾ ಮಾರ್ಗದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತ ಬಳಿಕ ದೇಶ ಎಲ್ಲಾ ರಂಗಗಳಲ್ಲಿ ಗಾಂಧಿ ತತ್ವದಲ್ಲಿ ಉನ್ನತಿ ಸಾಧಿಸುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾವೀರ ಕಾಲೇಜಿನ ಪ್ರಾಂಶುಪಾಲ ಪ್ರೊ. ಚಂದ್ರಶೇಖರ ದೀಕ್ಷಿತ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ರಮೇಶ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಅಜಾದ್ ಅಹ್ಮದ್, ಕಾರ್ಯಕ್ರಮ ಸಂಯೋಜಕ ಡಾ. ರಾಧಾಕೃಷ್ಣ ಶೆಟ್ಟಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿವೇಕ್, ಮಾನವಿಕ ಸಂಘದ ಅಧ್ಯಕ್ಷೆ ಸುಷ್ಮಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರಾಧಾಕೃಷ್ಣ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಷ್ಮಾ ವಂದಿಸಿದರು. ಉಪನ್ಯಾಸಕಿ ಪೂರ್ಣಿಮಾ ಕಾರ್ಯಕ್ರಮ ನಿರ್ವಹಿಸಿದರು.
