ಮೂಡುಬಿದಿರೆ: ತಾಲೂಕು ಮಟ್ಟದ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರವು ಸಮಾಜ ಮಂದಿರದ ಸ್ವರ್ಣ ಮಂದಿರದಲ್ಲಿ ಸೋಮವಾರ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದರು.

Mulyanka Shibira (1)

ಜಿಲ್ಲೆಯ ಸರ್ವಶಿಕ್ಷಣ ಅಭಿಯಾನದ ಉಪಯೋಜನಾ ಸಮನ್ವಯಾಧಿಕಾರಿ ಹಾಗೂ ಆರ್.ಎಂ.ಎಸ್.ಎ. ಉಪಯೋಜನಾ ಸಮನ್ವಯಾಧಿಕಾರಿ ಗೀತಾ ದೇವದಾಸ್ ಮಾರ್ಗದರ್ಶನ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಸುಶೀಲಾ, ಶರ್ಮಿಳಾ ಸೆರಾವೊ, ವಿನುತಾ, ಡೇಝಿ ಪಿಂಟೋ, ಪ್ರಸನ್ನ ಶೆಣೈ, ನಿರ್ಮಲಾ, ಸರೋಜಮ್ಮಾ, ಜೋಯ್ಸಾ ಮೊನಿಸ್, ಹರಿಣಾಕ್ಷಿ ಭಾಗವಹಿಸಿದ್ದರು.
ಜಿ.ಪಂ. ಸದಸ್ಯರಾದ ಕೆ.ಪಿ.ಸುಚರಿತ ಶೆಟ್ಟಿ, ಸುಜಾತಾ, ತಾ.ಪಂ. ಸದಸ್ಯ ಸಂತೋಷ್, ಸರ್ಕಾರಿ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಅನುದಾನಿತ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್, ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ಸ್ವಾಗತಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಸುಚಿತ್ರಾ ಗೊನ್ಸಾಲ್ವಿಸ್ ಪ್ರಾಸ್ತಾವಿಕ ಭಾಷಣ ಮಾಡಿದರು. ಬಿ.ಆರ್.ಪಿ. ಗೀತಾ ವಂದಿಸಿದರು. ಬಿ.ಐ.ಇ.ಆರ್.ಟಿ. ರೋಬರ್ಟ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *