ಮೂಡುಬಿದಿರೆ : ಸರ್ಕಾರಿ ನೌಕರರು ಕೆಲಸ ಬಿಟ್ಟು ಹೋರಾಟದ ಹಾದಿ ಹಿಡಿಯುವಂತಹ ಪರಿಸ್ಥಿತಿಯನ್ನು ನಾವೇ ಸೃಷ್ಟಿಸಿದ್ದೇವೆ. ಸರ್ಕಾರಿ ನೌಕರರು ಯಾವುದೇ ಆತಂಕವಿಲ್ಲದೆ ಕೆಲಸ ನಿರ್ವಹಿಸುವಂತಾಗಬೇಕು. ಎನ್‍ಪಿಎಸ್ ನೌಕರರ ಸಮಸ್ಯೆಗಳ ಕುರಿತು ವಿಧಾನಪರಿಷತ್ತಿನಲ್ಲಿ ಧ್ವನಿಯೆತ್ತುವುದಾಗಿ ವಿಧಾನಪರಿಷತ್ ಸದಸ್ಯ ಭೋಜೇಗೌಡ ಹೇಳಿದರು.
ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರ ಸಂಘದ ವತಿಯಿಂದ `ರಕ್ತ ಕೊಟ್ಟೇವು ಪಿಂಚಣಿ ಬಿಡೆವು’ ರಕ್ತದಾನ ಚಳುವಳಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಮಾತನಾಡಿ, `ಎನ್‍ಪಿಎಸ್ ನೌಕರರ ಬೇಡಿಕೆಯು ನ್ಯಾಯಯುತವಾಗಿದ್ದು ರಾಜ್ಯ ಸರ್ಕಾರವು ಸ್ಪಂದಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ನೆರವು ನೀಡುವುದಾಗಿ ಹೇಳಿದರು.

NPS Protest (1)
ಮುಖ್ಯ ಅತಿಥಿಗಳಾಗಿ ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಶಿಕಲಾ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಮಕೃಷ್ಣ ಶಿರೂರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್ ಭಟ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ ಕುಮಾರ್, ಟಿಜಿಟಿ ಸಂಘದ ಅಧ್ಯಕ್ಷೆ ಫ್ಲೆವಿಯಾ ಮರೀನಾ ಡಿಸೋಜ, ಎಸ್‍ಪಿಎಸ್‍ನ ಜಿಲ್ಲಾ ಕಾರ್ಯದರ್ಶಿ ಆದರ್ಶ ಕಟ್ಟಿಮಕ್ಕಿ ಪದನಿಮಿತ್ತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಮಂತ್ ಉಪಸ್ಥಿತರಿದ್ದರು.
ದೊರೆಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ ಎನ್‍ಪಿಎಸ್ ಹೋರಾಟದ ಹಿನ್ನೆಲೆಯನ್ನು ವಿವರಿಸಿದರು. ಕಾರ್ಯಕ್ರಮವನ್ನು ಜಗದೀಶ್ ಸ್ವಾಗತಿಸಿದರು. ನಿತೇಶ್ ಬಲ್ಲಾಳ್ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *