ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ರವರ ಸೂಚನೆಯಂತೆ ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಶಾಂತ್ ಕಾಜವರವರ ಶಿಫಾರಸು ಮಾಡುವುದರ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರು ಪುದು ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಆಸೀಫ್ ಇಕ್ಬಾಲ್ ದರ್ಬಾರ್ ರವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಯಿತು.

iqbal
ಇವರು ತಮಗೆ ವಹಿಸಲಾಗಿರುವ ಹೊಣೆ ಗಾರಿಕೆಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ ಹಿರಿಯ ನಾಯಕರ ಮಾರ್ಗದರ್ಶನ ಮತ್ತು ಸ್ಥಳೀಯ ಮುಂಖಡರ ಸಹಕಾರದೊಂದಿಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಕಾರ್ಯ ಕ್ರಮಗಳ ಅನುಷ್ಟಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ಗಳೊಂದಿಗೆ ಸಹಕರಿಸಿಕೊಂಡು ಕಾರ್ಯನಿರ್ವಹಿಸಬೇಕೆಂದು ತಿಳಿಸಲಾಯಿತು.
ನೇಮಕಾತಿ ಆದೇಶ ಪ್ರತಿ ನೀಡುವ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಉಮ್ಮರ್ ಫಾರೂಕ್ ಫರಂಗಿಫೇಟೆ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *