ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಪಡಿಬಾಗಿಲಿನ ದ ಕ ಜಿ ಪಂ ಹಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಗಾಂಧಿ ಜಯಂತಿ ಸಂದರ್ಭದಲ್ಲಿ ಖ್ಯಾತ ಸ್ಯಾಕ್ಸೋಫೋನ್ ವಾದಕ, ಯು ಎಸ್ ಎ ತಮಿಳು ವಿ ವಿ ಯಿಂದ ಗೌರವ ಡಾಕ್ಟರೇಟ್ ಪುರಸ್ಕøತ ವಿ ಕೆ ದಾಮೋದರ ಇವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಬಾಲಕೃಷ್ಣ ಕಾರಂತ ವಹಿಸಿದ್ದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ರೇಖಾ, ಇತರ ಸದಸ್ಯರು, ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ನವೀನ್ ಮತ್ತು ಸದಸ್ಯರು, ಮುಖ್ಯ ಶಿಕ್ಷಕಿ ಶಶಿಕಲಾ, ಸಹಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನುಫಾತಿಮತ್ ನಸ್ರೀನಾ ಸ್ವಾಗತಿಸಿದರು. ಸಮೀಕ್ಷಾ ವಂದಿಸಿದರು. ಆಸಿಯತ್ ಸಫ್ರೀನಾ ನಿರೂಪಿಸಿದರು.
