ಬಂಟ್ವಾಳ: ದ.ಕ.ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಬಂಟ್ವಾಳ, ಪುರಸಭೆ ಬಂಟ್ವಾಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಯುವಜನ ಒಕ್ಕೂಟ ( ರಿ.) ಬಂಟ್ವಾಳ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬಂಟ್ವಾಳ, ಎಸ್.ವಿ.ಎಸ್ ದೇವಳ ವಿದ್ಯಾಸಂಸ್ಥೆ ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ ಕಾರ್ಯಕ್ರಮ ಎಸ್.ವಿ.ಎಸ್ ದೇವಳ ಕ್ರೀಡಾಂಗಣ ಬಂಟ್ವಾಳ ಇಲ್ಲಿ ನಡೆಯಿತು.

kreedakoota (3)
ಕಾರ್ಯಕ್ರಮವನ್ನು ಶಾಸಕ ರಾಜೇಶ್ ನಾಯಕ್ ಉದ್ಘಾಟಿಸಿ ಮಾತನಾಡಿ, ಕ್ರೀಡೆ ಯಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬೆಳೆಯುವ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಕ್ಕೆ ನಾನು ಪ್ರಯತ್ನ ಮಾಡುತ್ತೇನೆ. ಕ್ರೀಡೆ ಯ ಮೂಲಕ ಸಾಧನೆ ಮಾಡಬೇಕು ಎಂಬುದು ನನ್ನ ಆಶಯ ಎಂದರು.

kreedakoota (2)
ಈ ಸಂದರ್ಭದಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು,  ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಎನ್, ಬಂಟ್ವಾಳ ಸರಕಾರಿ ನೌಕರರ ಸಂಘ ದ ಅದ್ಯಕ್ಷ ಉಮಾನಾಥ ರೈ ಮೇನಾವು ದೈಹಿಕ ಶಿಕ್ಷಕರ ಸಂಘದ ಅದ್ಯಕ್ಷ ಚೆನ್ನಪ್ಪ ಕೆ.ಜಾಲ್ಸೂರು , ತಾ.ಪಂ.ಇಒ ರಾಜಣ್ಣ, ಸಂಘದ ಪ್ರಮುಖರಾದ ಅಖಿಲ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

kreedakoota (1)

ತಾಲೂಕು ಪಂಚಾಯತ್ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ನವೀನ್ ಪಿ.ಎಸ್. ಸ್ವಾಗತಿಸಿ,
ದೈಹಿಕ ಶಿಕ್ಷಕರ ಸಂಘದ ಅದ್ಯಕ್ಷ ಚಿನ್ನಪ್ಪ ವಂದಿಸಿದರು. ಸಿಕ್ಷಕ ಜಯರಾಮ ಕಾರ್ಯಕ್ರಮ ನಿರೂಪಿಸಿದರು

By suddi9

Leave a Reply

Your email address will not be published. Required fields are marked *